ಬೆಂಗಳೂರು: ಲೋಕಸಭಾ ಚುನಾವಣೆಯ ನಂತರ ಕಾಂಗ್ರೆಸ್ ಸರ್ಕಾರ ಪತನ ವಿಚಾರಕ್ಕೆ ಮಾಜಿ ಸಚಿವ ವ್ಹಿ ಸುನೀಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲಲ್ಲ, ನಾಲ್ಕು ಬಾಗಿಲಾಗಿದೆ ಎಂದು ವ್ಯಂಗವಾಡಿದರು.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರವು ಅವರದೇ ಭಾರದಲ್ಲಿ ಕುಸಿದು ಬೀಳಲಿದೆ. ಕಾಂಗ್ರೆಸ್ ಸರಕಾರವು ಅವರದೇ ಭಾರದಲ್ಲಿ ಕುಸಿದು ಬೀಳಲಿದೆ ಎಂದರು. ಕಾಂಗ್ರೆಸ್ ನಲ್ಲಿ ನಾಯಕತ್ವಕ್ಕಾಗಿ 4 ರೀತಿಯ ಪೈಪೋಟಿ ಕಾಂಗ್ರೆಸ್ ಪಕ್ಷದಲ್ಲಿದೆ. ಸಿದ್ದರಾಮಯ್ಯನವರು ವರುಣಾ ಕ್ಷೇತ್ರದಲ್ಲಿ ಮಾಡಿದ ಭಾಷಣ ಇದಕ್ಕೆ ಜ್ವಲಂತ ಉದಾಹರಣೆ. ಲೋಕಸಭಾ ಚುನಾವಣಾ ಫಲಿತಾಂಶದ ಮೂಲಕ ತಮ್ಮ ಕುರ್ಚಿ ಮೇಲೆ ಅಪಾಯ ಇದೆ ಎಂದು ಅವರು ತಿಳಿಸಿದ್ದಾರೆ.
ಒಕ್ಕಲಿಗರು ಸಿಎಂ ಆಗುವುದಾಗಿ ಡಿ.ಕೆ.ಶಿವಕುಮಾರ್ ಅವರೂ ಬಹಿರಂಗವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜಾರಕಿಹೊಳಿಯವರು ಗುಪ್ತಗಾಮಿನಿ ರೂಪದಲ್ಲಿ ಶಾಸಕರನ್ನು ಸಂಪರ್ಕಿಸುತ್ತಿದ್ದಾರೆ. ಪರಮೇಶ್ವರ್ ಅವರು ಕೂಡ ಈ ನಿಟ್ಟಿನಲ್ಲಿ ಬೇರೆ ಬೇರೆ ಪ್ರಯತ್ನ ಮಾಡುತ್ತಿದ್ದಾರೆ ಎಂದರು.