- ಇಂತಹ ವಿಷಯಗಳನ್ನ ನನ್ನ ಬಳಿ ಚರ್ಚೆ ಮಾಡಬೇಡಿ
- ರಾಜ್ಯದ ಸಮಸ್ಯೆ ಸಂಬಂಧಪಟ್ಟ ವಿಚಾರಗಳನ್ನು ಚರ್ಚೆ ಮಾಡಿ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಪ್ರಕರಣದ ಬೆನ್ನಲ್ಲೆ ಸಹೋದರ ಸೂರಜ್ ರೇವಣ್ಣ ವಿರುದ್ಧ ಸಲಿಂಗ ಲೈಂಗಿಕ ದೌರ್ಜನ್ಯ ದೂರು ದಾಖಲಾಗಿದೆ. ಇನ್ನು ಈ ಬಗ್ಗೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವ ಹೆಚ್. ಡಿ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಈ ವೇಳೆ ಸೂರಜ್ ರೇವಣ್ಣ ಪ್ರಕರಣದ ಬಗ್ಗೆ ಕೇಳುತ್ತಿದ್ದಂತೆ ದಯವಿಟ್ಟು ಇಂತಹ ವಿಷಯಗಳನ್ನ ನನ್ನ ಬಳಿ ಚರ್ಚೆ ಮಾಡಬೇಡಿ. ರಾಜ್ಯಕ್ಕೆ ಸಂಬಂಧಪಟ್ಟ ವಿಚಾರಗಳ ಬಗ್ಗೆ ಅಷ್ಟೇ ಚರ್ಚೆ ಮಾಡಿ ಅಂತಾ ಹೇಳಿದ್ದಾರೆ.
ಇಂತಹ ವಿಚಾರಗಳನ್ನ ನನ್ನ ಹತ್ತಿರ ಯಾಕೆ ಚರ್ಚೆ ಮಾಡುತ್ತೀರಾ? ಅದರ ಅವಶ್ಯಕತೆ ಏನಿಕೆ ಕಾನೂನು ಇದ್ದು, ಅದನ್ನು ಕಾನೂನು ನೋಡಿಕೊಳ್ಳುತ್ತದೆ . ಮುಂದಿನ ದಿನಗಳಲ್ಲಿ ಗೊತ್ತಾಗುತ್ತದೆ. ಆ ತರಹದ ಪ್ರಶ್ನೆಗಳನ್ನ ಕೇಳಬೇಡಿ ಎಂದು ಹೇಳಿದರು.