ಮದುವೆಯಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪರಾಧಿಗೆ ಒಂದನೇ FTSC ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹5 ಸಾವಿರ ದಂಡ ವಿಧಿಸಿದೆ.
ತಲ್ಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ರಾಘವೇಂದ್ರ ಎಂಬಾತ ಬಾಲಕಿಯನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಮನೆಗೆ ಕರೆದುಕೊಂಡು ಹೋಗಿ ಮದುವೆಯಾಗುವುದಾಗಿ ಲೈಂಗಿಕ ಕ್ರಿಯೆ ಸಹ ನಡೆಸಿದ್ದ. ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಸಂತ್ರಸ್ತೆಯ ತಂದೆ ಪೊಲೀಸರಿಗೆ ಈ ವಿಷಯ ತಿಳಿಸಿದರು. ಆರೋಪಿ ವಿರುದ್ಧ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದರು. ತನಿಖಾಧಿಕಾರಿ ಸಿದ್ದರಾಜು ದೋಷಾರೋಪಣಾ ಪಟ್ಟಿ ಸಲ್ಲಿಸಿದರು. ಆರೋಪ ಸಾಬೀತದ ಹಿನ್ನೆಲೆಯಲ್ಲಿ ನ್ಯಾಯಾಧೀಶರು 20 ವರ್ಷ ಶಿಕ್ಷೆ ವಿಧಿಸಿದ್ದಾರೆ. ಅಲ್ಲದೇ ITP ಕಲಂ ಅಡಿ 1 ವರ್ಷ ಸಾಧಾರಣಾ ಕಾರಾಗೃಹ ಶಿಕ್ಷೆ ಮತ್ತು 5 ಸಾವಿರ ದಂಡ ವಿಧಿಸಿದ್ದಾರೆ. ಬಾಲಕಿಗೆ DLSಯಿಂದ ₹ 5 ಲಕ್ಷ ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ.