ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗಾಗಿ ಆಗ್ರಹಿಸಿ, ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಕನ್ನಡ ಒಕ್ಕೂಟದಿಂದ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿದರು. ಸರ್ಕಾರ ಹಾಗೂ ಉದ್ಯಮಿಗಳ ವಿರುದ್ಧ ಕನ್ನಡ ಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡಿಗರಿಗೆ ಮೀಸಲಾತಿ ಬೇಕೇ..ಬೇಕು… ಇಲ್ಲವಾದ್ರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು. ಪ್ರತಿಭಟನೆ ವೇಳೆ ನಟರಾಜ್ ಬೊಮ್ಮಸಂದ್ರ, ಕನ್ನಡ ಒಕ್ಕೂಟದ ಅಧ್ಯಕ್ಷರು ಮೇಲ್ಕೋಟೆ ಬೆಟ್ಟಸ್ವಾಮಿ ಗೌಡ, ಅಧ್ಯಕ್ಷರು ಮುಂತಾದವರು ಉಪಸ್ಥಿತರಿದ್ದರು.