ಕನ್ನಡಿಗರಿಗೆ ಮೀಸಲಾತಿ ತಡೆಹಿಡಿದ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ. ಮೀಸಲಾತಿ ವಿಚಾರವಾಗಿ ಸರ್ಕಾರದ ನಡೆ ಖಂಡಿಸಿ ಇಂದು ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಒಕ್ಕೂಟದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು.
ಸಿಎಂ ಸಿದ್ದರಾಮಯ್ಯ ಹಿಂಪಡೆದಿರುವ ಮೀಸಲಾತಿಯನ್ನು ಈ ಬಾರಿಯ ಅಧಿವೇಶನದಲ್ಲೇ ಮಂಡಿಸಬೇಕೆಂದು ಆಗ್ರಹಿಸಿದ್ರು. ಈ ವೇಳೆ ಪ್ರತಿಭಟನಾನಿರತ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ಸರ್ಕಾರ ಮೀಸಲಾತಿ ಹಿಂಪಡೆದು ಕನ್ನಡಿಗರಿಗೆ ಅಪಮಾನ ಮಾಡಿದೆ. ಇದರ ವಿರುದ್ಧ ಕರ್ನಾಟಕ ಬಂದ್ ಮಾಡುತ್ತೇವೆ, ಜುಲೈ 25ಕ್ಕೆ ಕನ್ನಡ ಪರ ಸಂಘಟನೆಗಳು ಸಭೆ ನಡೆಸಿ ಬಂದ್ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದೇವೆ, ಮೀಸಲಾತಿ ನಿರ್ಧಾರ ಕೈಗೊಳ್ಳಲು ಸರ್ಕಾರಕ್ಕೆ ಜುಲೈ 28ರವರೆಗೆ ಡೆಡ್ಲೈನ್ ನೀಡುತ್ತೇವೆ ಎಂದರು.