- ಮಾಜಿ ಮುಖ್ಯಮಂತ್ರಿ ವೀರಪ್ಪಮೊಯ್ಲಿ ಪುತ್ರಿ ನಿಧನ
- ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ಇನ್ನಿಲ್ಲ
ಮಾಜಿ ಮುಖ್ಯಮಂತ್ರಿ ವೀರಪ್ಪಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ನಿನ್ನೆ ತಡರಾತ್ರಿ ವಿಧಿವಶರಾಗಿದ್ದಾರೆ. ಸಾಕಷ್ಟು ದಿನಗಳಿಂದಲೇ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ರಾಜಕೀಯ ಕಾರ್ಯದಲ್ಲಿ ತೊಡಗಿಕೊಂಡಿದ್ದ ವಿರಪ್ಪ ಮೊಯ್ಲಿ ವಿಷಯ ತಿಳಿಯುತ್ತಿದ್ದಂತೆಯೇ ಛತ್ತೀಸ್ಗಢ ಪ್ರವಾಸವನ್ನು ಕೈಬಿಟ್ಟು ಬೆಂಗಳೂರಿಗೆ ಧಾವಿಸಿದ್ದಾರೆ. ನಾಳೆ ಬೆಳಗ್ಗೆ ಹಂಸ ಮೊಯ್ಲಿ ಅವರ ಅಂತ್ಯಸಂಸ್ಕಾರ ನಡೆಯಲಿದೆ.