ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ದರ್ಶನ್ ಅರೆಸ್ಟ್ ನಂತರ ಅವರ ಫ್ಯಾನ್ಸ್ ಅಂಧಾಭಿಮಾನ ಮಿತಿ ಮೀರಿದೆ. ವಾಹನಗಳ ಮೇಲೆ ದರ್ಶನ್ ಕೈದಿ ನಂಬರ್ ಸೇರಿದಂತೆ ತರಹೇವಾರಿ ಸ್ಟಿಕ್ಕರ್ಗಳನ್ನು ಅಂಟಿಸಿ ಅಭಿಮಾನ ಮೆರೆಯುತ್ತಿದ್ದಾರೆ. ಅಂತಹ ಅಭಿಮಾನಿಗಳಿಗೆ ಆರ್ಟಿಓ ಎಚ್ಚರಿಕೆ ಕೊಟ್ಟಿದೆ.
ಕೊಲೆ ಆರೋಪಿ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆದ್ಮೇಲೆ ಅವರ ಅಭಿಮಾನಿಗಳು ವಾಹನಗಳ ಮೇಲೆ ತರಹೇವಾರಿ ಬರಹ ಬರೆದು ಅಂಧಾಭಿಮಾನ ಮೆರೆಯುತ್ತಿದ್ದಾರೆ. ದರ್ಶನ್ಗೆ ನೀಡಿರುವ ಕೈದಿ ಸಂಖ್ಯೆ, ಸೇರಿದಂತೆ ವಾಹನಗಳ ಮೇಲೆ ಪ್ರಚೋದನಕಾರಿ, ಬೇರೆ ನಟರ ಫ್ಯಾನ್ಸ್ಗೆ ಟಾಂಗ್ ಕೊಡುವಂತ ಬರಹಗಳ ಸ್ಟಿಕರ್ ಅಳವಡಿಸಿಕೊಂಡಿರುವುದು ಹೆಚ್ಚಾಗಿ ಕಂಡುಬರುತ್ತಿದೆ. ಈ ಬಗ್ಗೆ ನಿಗಾ ವಹಿಸಿರುವ ಪೊಲೀಸರು ಹಾಗೂ ಆರ್ಟಿಒ ಇಲಾಖೆ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದು, ʻಡಿಬಾಸ್ʼ ಅಭಿಮಾನಿಗಳಿಗೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ವಾಹನಗಳ ಮೇಲೆ ಬೇರೆ ಬೇರೆ ರೀತಿಯ ಬರಹಗಳನ್ನು ಅಳವಡಿಸಿಕೊಳ್ಳುವುದು ಹೆಚ್ಚಾಗಿ ಕಂಡುಬರುತ್ತಿದೆ. ಈ ಹಿಂದೆ ಈ ಮಟ್ಟಿಗೆ ಬರಹಗಳನ್ನ ವಾಹನಗಳ ಮೇಲೆ ಹಾಕಿರಲಿಲ್ಲ. ಈ ಬಗ್ಗೆ ಆರ್ಟಿಒ ಇಲಾಖೆ ಹಾಗೂ ಪೊಲೀಸ್ ಇಲಾಖೆ ಗಮನಕ್ಕೆ ಬಂದಿದ್ದು, ಅನವಶ್ಯಕ ಬರಹಗಳು ಕಂಡುಬಂದಲ್ಲಿ ಕ್ರಮ ತೆಗೆದುಕೊಳ್ಳೂತ್ತೇವೆ. ನೆಚ್ಚಿನ ನಟರ ಫೋಟೋಗಳನ್ನ ವಾಹನಗಳ ಮೇಲೆ ಹಾಕೋದು ಕಾನೂನು ಬಾಹಿರ ಎಂದು ಹೆಚ್ಚುವರಿ ಸಾರಿಗೆ ಆಯುಕ್ತ ಸಿ. ಮಲ್ಲಿಕಾರ್ಜುನ್ ಎಚ್ಚರಿಸಿದ್ದಾರೆ.