- ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಯೋಗಾಸನ
- ಸಿಎಂ ಸಿದ್ದರಾಮಯ್ಯ ಸರ್ಕಾರ ಗೊಂದಲದಲ್ಲಿದೆ
ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಯೋಗಾಸನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ, ರಾಜ್ಯದ ಮಾಜಿಉಪಮುಖ್ಯಮಂತ್ರಿಗಳಾದ ಡಾ. ಸಿ.ಎನ್.ಅಶ್ವತ್ಥನಾರಾಯಣ್,ಕನ್ನಡ ಚಲನಚಿತ್ರ ನಟ ಮತ್ತು ನಿರ್ದೇಶಕ ಶ್ರೀ ವಿಕ್ಕಿ ವರುಣ್ ಉಪಸ್ಥಿತರಿದ್ದರು.
ಸಿಎಂ ಸಿದ್ದರಾಮಯ್ಯ ಸರ್ಕಾರ ಗೊಂದಲದಲ್ಲಿದೆ. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯ ಸಮರ್ಥವಾಗಿ ಸಾಗುತ್ತಾ ಇಲ್ಲ. ಹಿರಿಯ ನಾಯಕ, 14 ಭಾರಿ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯನವರು ಯೋಚಿಸಬೇಕು ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಎಂದು ಹೇಳಿದ್ದಾರೆ.