ಬೆಂಗಳೂರು: ಮಾಜಿ ಸಚಿವ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶಕ್ಕೆ ಹೈಕೋರ್ಟ್ ಅವಕಾಶ ನೀಡಿದೆ. ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡದಿಂದ ದೂರ ಉಳಿದಿದ್ದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಕರ್ನಾಟಕ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ಕಳೆದ ವಿಧಾನಸಭಾ ಚುನಾವಣೆಯಿಂದಲೂ ಮತದಾನಕ್ಕೆ ಅವಕಾಶ ಸಿಗದ ವಿನಯ್ ಕುಲಕರ್ಣಿಗೆ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಧಾರವಾಡದಲ್ಲಿ ಮತದಾನ ಮಾಡಲು ಹೈಕೋರ್ಟ್ ಅನುಮತಿ ನೀಡಿದೆ. ಮತದಾನ ಮಾಡಿ ಹೊರ ಬರುವಂತೆ ಷರತ್ತಿನ ಮೇರೆಗೆ ನ್ಯಾಯಪೀಠ ಅನುಮತಿ ನೀಡಿದೆ.