ಒಂದು ಹುಡುಗ ಮತ್ತು ಹುಡುಗಿಯ ನಡುವೆ ಪ್ರೀತಿ ಯಾವಾಗ, ಹೇಗೆ ಹುಟ್ಟುತೆ ಅಂತ ಹೇಳಲು ಸಾಧ್ಯವಿಲ್ಲ. ಈ ಡಿಜಿಟಲ್ ಯುಗದಲ್ಲಿ ಮುಖ ಪರಿಚಯವಿಲ್ಲದಿದ್ದರೂ ಸೋಷಿಯಲ್ ಮೀಡಿಯಾದ ಮೂಲಕ ಅರಳಿದ ಅದೆಷ್ಟೋ ಲವ್ ಸ್ಟೋರಿಗಳು ಇವೆ. ಹೀಗೆ ಸೋಷಿಯಲ್ ಮೀಡಿಯಾದ ಮೂಲಕ ಪರಿಚಯವಾಗಿ ಯುವಕ ಯುವತಿಯರು ಸ್ನೇಹ, ಪ್ರೀತಿ, ಮದುವೆ ಅಂತ ಮಾತಾಡೋದನ್ನ ನಾವೆಲ್ಲಾ ನೋಡೆ ಇರ್ತೀವಿ. ಅದೇ ರೀತಿ ಇಲ್ಲೊಂದು ಜೋಡಿ ಕೂಡಾ ಸೋಷಿಯಲ್ ಮೀಡಿಯಾದ ಮೂಲಕ ಪರಿಚಯವಾಗಿ ಇದೀಗ ಅದ್ಧೂರಿಯಾಗಿ ಮದುವೆಯಾಗಿದ್ದು, ಅವರಿಬ್ಬರ ನಡುವೆ ಪ್ರೀತಿ ಹುಟ್ಟಲು ಕಾರಣವಾದ ಟ್ವೀಟ್ ಇದೀಗ ವೈರಲ್ ಆಗುತ್ತಿದೆ.
ಸೋಷಿಯಲ್ ಮೀಡಿಯಾದ ಮೂಲಕ ಪರಿಚಯವಾಗಿ, ಆ ಪರಿಚಯ ಪ್ರೀತಿಗೆ ತಿರುಗಿ ಮದುವೆಯಾದ ಜೋಡಿಗಳು ಹಲವರಿದ್ದಾರೆ. ಅದೇ ರೀತಿ ಇಲ್ಲೊಂದು ಜೋಡಿ ಕೂಡಾ ಸೋಷಿಯಲ್ ಮೀಡಿಯಾದ ಮೂಲಕ ಪರಿಚಯವಾಗಿ ಮದುವೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸ್ಟಾರ್ಟ್ ಆದ ಅವರಿಬ್ಬರ ಸರಳ ಪ್ರೇಮಕಥೆ ಇದೀಗ ಸಖತ್ ವೈರಲ್ ಆಗುತ್ತಿದೆ.