ಬಿಜೆಪಿ ನಾಯಕ ಬಸನಗೌಡ ಪಾಟಿಲ್ ಯತ್ನಾಳ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ಗೆ ದೂರು ಕೊಟ್ಟಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಅರ್ಥಿಕ ಹೊರೆಯಾಗಿದೆ. ರಾಜ್ಯ ಸರ್ಕಾರಕ್ಕೆ ವಾರ್ಷಿಕ 60 ಸಾವಿರ ಕೋಟಿ ಆರ್ಥಿಕ ಹೊರೆ ಬೀಳುತ್ತಿದೆ, ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಅರ್ಥಿಕವಾಗಿ ದಿವಾಳಿಯಾಗುತ್ತದೆ, ಆದ್ದರಿಂದ ಅಗತ್ಯ ಕ್ರಮ ಕೈಗೊಳ್ಳಿ ಎಂದು ಶಾಸಕ ಬಸನಗೌಡ ಪಾಟಿಲ್ ಯತ್ನಾಳ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ನಿರ್ಮಲಾ ಸೀತಾರಾಮನ್ ರವರು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಯತ್ನಾಳ್ ಹೇಳಿಕೊಂಡಿದ್ದಾರೆ.