ಮಕ್ಕಳ ಬಗ್ಗೆ ಎಷ್ಟೇ ಎಚ್ಚರವಹಿಸಿದರೂ ಅದು ಕಡಿಮೆಯೇ, ಹೌದು, ಇಂದು ಸಂಜೆ 4 ಗಂಂಟೆಯ ಸುಮಾರಿಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಬಿಬಿಎಂಪಿ ಮೈದಾನದ ಗೇಟ್ ಬಿದ್ದು 7 ವರ್ಷದ ಮಗು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಸ್ಥಳಕ್ಕೆ ಮಲ್ಲೇಶ್ವರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಇಂದು ಸಂಜೆ 4 ಗಂಂಟೆಯ ಸುಮಾರಿಗೆ ಬಿಬಿಎಂಪಿ ಮೈದಾನದ ಗೇಟ್ ಬಿದ್ದು 7 ವರ್ಷದ ಮಗು ಸಾವನ್ನಪ್ಪಿದ ಘಟನೆ ನಡೆದಿದೆ. ನಿರಂಜನ್ ಮೃತ ಬಾಲಕ. ವಿಜಯಕುಮಾರ್ ಮತ್ತು ಪ್ರಿಯಾ ದಂಪತಿಯ ಮಗುವಾದ ನಿರಂಜನ್, ಆಟ ಆಡಲು ಮೈದಾನದ ಗೇಟ್ ಓಪನ್ ಮಾಡುತ್ತಿದ್ದಂತೆ ಮಗುವಿನ ಮೇಲೆಯೇ ಗೇಟ್ ಬಿದ್ದಿದೆ. ಈ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಕೂಡಲೇ ಸ್ಥಳೀಯರು ಮಗುವನ್ನು ಕೆ ಸಿ ಜನರಲ್ ಆಸ್ಪತ್ರೆ ಕರೆದುಕೊಂಡು ಹೋಗಿದ್ದಾರೆ.
ಆದರೆ, ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಮಗು ಕೊನೆಯುಸಿರೆಳೆದಿದೆ. ಮೃತ ನಿರಂಜನ್ ಮಲ್ಲೆಶ್ವರಂನ ಬಿಬಿಎಂಪಿ ಶಾಲೆಯಲ್ಲಿ 5 ನೇ ತರಗತಿಯಲ್ಲಿ ಓದುತ್ತಿದ್ದ. ಜೊತೆಗೆ ತಂದೆ ವಿಜಯಕುಮಾರ್ ಆಟೋ ಚಾಲಕರಾಗಿದ್ದು, ಮಲ್ಲೇಶ್ವರನ ಫೈಪ್ ಲೈನ್ನಲ್ಲಿ ಈ ಕುಟುಂಬ ವಾಸವಾಗಿತ್ತು. ಇನ್ನು ಘಟನೆ ಬಳಿಕ ಸ್ಥಳಕ್ಕೆ ಮಲ್ಲೇಶ್ವರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.