ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಅವಾಂತರಗಳು ಸೃಷ್ಟಿಯಾಗುತ್ತಿದೆ. ಹೀಗಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರು ಬಿಬಿಎಂಪಿ(BBMP) ಜೊತೆ ಸಭೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅವರು ‘ ಇನ್ನು ಮುಂದೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ಓಪನ್ ಮಾಡಲಾಗಿದೆ. ಸಿಎಸ್ ಸೂಚನೆ ಹಿನ್ನೆಲೆ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ನಗರದ 8 ವಲಯ ವ್ಯಾಪ್ತಿಯಲ್ಲಿ 8 ನಿಯಂತ್ರಣ ಕೊಠಡಿಗಳಿದ್ದು, ಪಾಲಿಕೆ ಕೇಂದ್ರ ಕಛೇರಿಯಲ್ಲಿ 1 ನಿಯಂತ್ರಣ ಕೊಠಡಿಯಿದೆ. ಮಳೆಯಿಂದಾಗಿ ಏನಾದರು ಸಮಸ್ಯೆಗಳಿದ್ದರೆ, ಸಾರ್ವಜನಿಕರು ಪಾಲಿಕೆಯ ಉಚಿತ ಸಹಾಯವಾಣಿ ಸಂಖ್ಯೆಯಾದ 1533ಗೆ ಕರೆ ಮಾಡಿ ದೂರು ನೀಡಬಹುದಾಗಿದೆ. ಸದರಿ ದೂರಗಳನ್ನು ಸಂಬಂಧಪಟ್ಟ ವಲಯ ಹಾಗೂ ಅಧಿಕಾರಿಗಳ ಗಮನಕ್ಕೆ ತಂದು ಶೀಘ್ರವಾಗಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.