ವಸತಿ ಶಾಲೆಯ ವಿದ್ಯಾರ್ಥಿನಿಯೊಬ್ಬಳು ಮಹಡಿ ಮೇಲಿಂದ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ನಡೆದಿದೆ. ಗೋಕಾಕ ತಾಲೂಕಿನ ಶಿಂದಿ ಕುರಬೇಟ್ ಗ್ರಾಮದ ಆಪ್ರೀನ್ ಜಮಾದಾರ (17) ಮೃತ ವಿದ್ಯಾರ್ಥಿನಿ. ಪರೀಕ್ಷೆ ಇದ್ದ ಹಿನ್ನೆಲೆ ಮಧ್ಯ ರಾತ್ರಿ ಮೊದಲ ಮಹಡಿ ಮೇಲೆ ಓದುತ್ತ ಕುಳಿತಿದ್ದ ವಿದ್ಯಾರ್ಥಿನಿ, ಆಯಾ ತಪ್ಪಿ ಕೆಳಗೆ ಬಿದ್ದಿದ್ದಾಳೆ. ಆದರೆ ವಿದ್ಯಾರ್ಥಿನಿಯ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿರುವ ಪೋಷಕರು, ಇದು ಸಹಜ ಸಾವಲ್ಲ ಎಂದು ಆರೋಪಿಸಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.