ಪ್ಯಾಲೆಸ್ತೀನ್-ಇಸ್ರೇಲ್ ಮಧ್ಯೆ ಯುದ್ಧ ನಡೆಯುತ್ತಿದೆ. ಪ್ಯಾಲೆಸ್ತೀನ್ ದೇಶಕ್ಕೆ ಬೆಂಬಲ ನೀಡುವಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಿಡಿಗೇಡಿಗಳು ಕರ್ನಾಟಕದಲ್ಲಿ ಪ್ಯಾಲೆಸ್ತೀನ್ ದೇಶದ ಪರ ಘೋಷಣೆ ಕೂಗುತ್ತಿದ್ದಾರೆ. ಬೆಳಗಾವಿ ನಗರದ ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ರೀತಿ ಹೋಲುವ ಶಾಮಿಯಾನ ಹಾಕಲಾಗಿದೆ.
ಕರ್ನಾಟಕದಲ್ಲಿ ಪ್ಯಾಲೆಸ್ತೀನ್ ದೇಶದ ಪರ ಘೋಷಣೆ ಮತ್ತು ಧ್ವಜ ಹಾರಾಟ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಿವೆ. ಚಿಕ್ಕಮಗಳೂರು, ಕೋಲಾರ ಬಳಿಕ ಇದೀಗ ಬೆಳಗಾವಿ ನಗರದ ದರ್ಬಾರ್ ಗಲ್ಲಿಯಲ್ಲಿ ಕಿಡಿಗೇಡಿಗಳು ಪ್ಯಾಲೆಸ್ತೀನ್ ಧ್ವಜದ ರೀತಿ ಹೋಲುವ ಶಾಮಿಯಾನ ಹಾಕಿದ್ದಾರೆ.
ಗಣೇಶೋತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಈದ್ ಮಿಲಾದ್ ಮೆರವಣಿಗೆಯನ್ನು ನಾಳೆ ಮಮುಂದೂಡಲಾಗಿದೆ. ಈದ್ ಮಿಲಾದ್ ಮೆರವಣಿಗೆ ಸಾಗುವ ದರ್ಬಾರ್ ಗಲ್ಲಿಯ 200 ಮೀಟರ್ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜದ ರೀತಿ ಹೋಲುವ ಶಾಮಿಯಾನ ಹಾಕಲಾಗಿದೆ. ಇದನ್ನು ಕಂಡ ಮಾರ್ಕೆಟ್ ಠಾಣೆ ಪೊಲೀಸರು ಪೊಲೀಸರು ಪ್ಯಾಲೆಸ್ತೀನ್ ಧ್ವಜದ ರೀತಿ ಹೋಲುವ ಶಾಮಿಯಾನ ತೆರವುಗೊಳಿಸಿದ್ದಾರೆ. ಪ್ಯಾಲೆಸ್ತೀನ್ ಧ್ವಜದ ರೀತಿ ಹೋಲುವ ಶಾಮಿಯಾನ ಕಟ್ಟಿದವರ ಬಗ್ಗೆ ಮಾರ್ಕೆಟ್ ಠಾಣೆ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.