ಹಾಡಹಗಲೇ ಮನೆಗೆ ನುಗ್ಗಿ ಇಬ್ಬರು ಮಕ್ಕಳನ್ನು ಖದೀಮರು ಕಿಡ್ನ್ಯಾಪ್ ಮಾಡಿರುವಂತಹ ಘಟನೆ ಜಿಲ್ಲೆಯ ಅಥಣಿಯ ಸ್ವಾಮಿ ಫ್ಲಾಟ್ನಲ್ಲಿ ನಡೆದಿದೆ. ನೀರು ಕೇಳುವ ನೆಪದಲ್ಲಿ ಮನೆಗೆ ಬಂದು ವಿಜಯ್ ದಂಪತಿಯ ಮಕ್ಕಳಾದ ಸ್ವಸ್ತಿ ದೇಸಾಯಿ, ವಿಯೋಮ್ ದೇಸಾಯಿ ಅನ್ನು ಅಪಹರಿಸಿದ್ದಾರೆ.
ಇಬ್ಬರು ಮಕ್ಕಳು ಎಲ್ಕೆಜಿ ಶಾಲೆಗೆ ಹೋಗಿ ಮನೆಗೆ ಬಂದಿದ್ದರು. ಮನೆಯಲ್ಲಿ ಅಜ್ಜಿ ಮಾತ್ರ ಇರೋದನ್ನ ಗಮನಿಸಿದ ಖದೀಮರು ಕೃತ್ಯವೆಸಗಿದ್ದಾರೆ. ಮಕ್ಕಳನ್ನು ಅಪಹರಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದ್ದು, ಅಥಣಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.