ಬೆಳಗಾವಿ ಸುವರ್ಣಸೌಧದ ಪಶ್ಚಿಮ ದ್ವಾರದ ಬಳಿ ಇಂದು ರಣಾಂಗಣವೇ ಸೃಷ್ಟಿಯಾಗಿದೆ. ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಸಿದ್ದಾರೆ ಎಂದು ಆರೋಪಿಸಿ ಹೆಬ್ಬಾಳ್ಕರ್ ಬೆಂಬಲಿಗರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಸಿ.ಟಿ ರವಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿ.ಟಿ ರವಿ ಅವರು ಸುವರ್ಣಸೌಧಕ್ಕೆ ಆಗಮಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆಗೆ ಯತ್ನ ಮಾಡಿದರು. ಕೂಡಲೇ ಮಧ್ಯಪ್ರವೇಶಿಸಿದ ಪೊಲೀಸರು ಸಿ.ಟಿ ರವಿ ಅವರ ಸಹಾಯಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಹಲ್ಲೆಗೂ ಮುಂದಾದ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರನ್ನ ತಡೆದ ಪೊಲೀಸರು ಬಂಧಿಸಿದ್ದಾರೆ.