ರಾಜ್ಯ ರಾಜಕೀಯ ಚುನಾವಣೆಯ ಅಖಾಡ ರಂಗೇರಿದ್ದು, ಲೋಕಾ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಭಾರೀ ಕುತೂಹಲ ಕೆರಳಿಸಿದ್ದ ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆಲವು ಸಾಧಿಸಿದ್ದಾರೆ. ಜಗದೀಶ್ ಶೆಟ್ಟರ್ ವಿರುದ್ಧ ಮೃಣಾಲ್ ಹೆಬ್ಬಾಳ್ಕರ್ ಸ್ಪರ್ಧಿಸಿದ್ದರು. ಆದರೆ ಮೃಣಾಲ್ ವಿರುದ್ಧ ಶೆಟ್ಟರ್ 1,51,677 ಮತಗಳ ಅಂತರದಿಂದ ಗೆದ್ದಿದ್ದಾರೆ. 16ನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆ 1,33,838 ಮತಗಳ ಮುನ್ನಡೆಯಾಗಿತ್ತು. 20ನೇ ಸುತ್ತಿನ ಮತ ಎಣಿಕೆ ಮುಕ್ತಾಯದ ವೇಳೆ ಶೆಟ್ಟರ್ 1,51,677 ಮತಗಳ ಮುನ್ನಡೆ ಸಾಧಿಸಿದ್ದಾರೆ.