ಬೆಳಗಾವಿಯ ನೂತನ ಜಿಲ್ಲಾಧಿಕಾರಿಯಾಗಿ ಮೊಹಮ್ಮದ್ ರೋಷನ್ ಅವರು ಶುಕ್ರವಾರ ಅಧಿಕಾರ ಸ್ವೀಕಾರ ಮಾಡಿಕೊಂಡಿದ್ದಾರೆ. ಮಾಜಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರವನ್ನು ಹಸ್ತಾಂತರಿಸಿದರು.
ಮೊಹಮ್ಮದ್ ರೋಷನ್ ಅವರು 2015 ನೇ ಬ್ಯಾಚಿನ ಐ.ಎ.ಎಸ್. ಅಧಿಕಾರಿಯಾಗಿದ್ದರು. ಈ ಮುಂಚೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಕೂಡ ಕಾರ್ಯನಿರ್ವಹಿಸುತ್ತಿದ್ದರು. ಬಿ.ಟೆಕ್ ಹಾಗೂ ಎಂ.ಬಿ.ಎ., ಎಂ.ಎ. ಪದವೀಧರರಾಗಿರುವ ರೋಷನ್, ಹಾವೇರಿ ಮತ್ತು ಉತ್ತಕ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ನಿರ್ಗಮಿತ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರಿಗೆ ಶುಭಕೋರಿದರು. ಇದೇ ವೇಳೆ ನೂತನ ಜಿಲ್ಲಾಧಿಕಾರಿಗಳಿಗೆ ಹೂಗುಚ್ಛ ನೀಡಿ ಬರಮಾಡಿಕೊಂಡರು.