ಬೆಳಗಾವಿ: ಪಂಚಮಸಾಲಿ ಸಮುದಾಯದವರು 2ಎ ಮೀಸಲಾತಿಗಾಗಿ ಆಗ್ರಹಿಸಿ ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಪ್ರತಿಭಟನೆ ನಡೆಸುತ್ತಿದ್ದ, ಕೂಡಲಸಂಗಮ ಪೀಠದ ಬಸವ ಜಯಮ್ಮತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಸಮುದಾಯದ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದವರು ಪ್ರತಿಭಟನೆ ನಡೆಸಿದ್ದು, ಸುವರ್ಣಸೌಧಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ. ಪೋಲೀಸರು ಲಾಠಿ ಪ್ರಹಾರ ನಡೆಸಿದ್ದು, ಬೆಳಗಾವಿ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ಗಳ ಮೇಲೇರಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಯನ್ನ ಕೂಗಿದ್ದು ಕಲ್ಲು ತೂರಾಟವನ್ನು ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಮುತ್ತಿಗೆ ಹಾಕಲು ಯತ್ನಿಸಿದ ಹೋರಾಟಗಾರರನ್ನ ಪೊಲೀಸರು ತಡೆಯಲು ಪ್ರಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಹೋರಾಟಗಾರರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.
ಇನ್ನೊಂದೆಡೆ ಸ್ವಾಮೀಜಿ ನೇತೃತ್ವದಲ್ಲಿ ಸುವರ್ಣಸೌಧದ ಬಳಿ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡಿದೆ ಪ್ರತಿಭಟನೆಗೆ ಶಾಸತ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ್ ಬೆಲ್ಲದ್ ಮೊದಲಾದವರು ಬೆಂಬಲ ನೀಡಿದ್ದಾರೆ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ಪೊಲೀಸರು ಬಸವ ಜಯಮ್ಮತ್ಯುಂಜಯ ಸ್ವಾಮೀಜಿ, ಶಾಸಕರಾದ ಯತ್ನಾಳ್, ಅರವಿಮ್ಮ ಬೆಲ್ಲದ್ ಸೇರಿದಂತೆ ಹಲವರನ್ನು ವಶಕ್ಕೆ ಪಡೆದಿದ್ದಾರೆ.