ಲೋಕಸಭೆ ಕ್ಷೇತ್ರದಲ್ಲಿ ಚುನಾವಣಾ ಕಾವು ಜೋರಾಗಿದ್ದು, ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆದಿದೆ. ಇನ್ನು ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಆಗಮಿಸಿದ್ದು, ಇಂದು ನಾಲ್ಕು ಕಡೆ ಪ್ರಚಾರ ಆರಂಭಿಸಿದ್ದಾರೆ. ನರೇಂದ್ರ ಮೋದಿಯವರು ಬೆಳಗಾವಿ, ದಾವಣಗೆರೆ, ಹೊಸಪೇಟೆ, ಶಿರಸಿಯಲ್ಲಿ ನಡೆಯುವ ನಾಲ್ಕು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಮೊದಲು ಬೆಳಗಾವಿಯಲ್ಲಿ ನಡೆಯುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬೆಳಗಾವಿಯಿಂದ ಹೊರಟು 12.55ಕ್ಕೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ತಲುಪಲಿದ್ದಾರೆ.