ಬೆಳ್ತಂಗಡಿ ಯುವ ಮೋರ್ಚಾ ಮಂಡಲ ಅಧ್ಯಕ್ಷರಾದ ಶಶಿರಾಜ್ ಬಂಧನ ಖಂಡಿಸಿ ಶಾಸಕ ಹರೀಶ್ ಪೂಂಜಾ ತಡರಾತ್ರಿ ಪ್ರತಿಭನಟೆ ನಡೆಸಿದ್ದಾರೆ. ಬೆಳ್ತಂಗಡಿ ಪೊಲೀಸರು ವಿನಾಕಾರಣ ಸುಳ್ಳು ಆರೋಪವನ್ನು ಹೊರಿಸಿ ಮಧ್ಯರಾತ್ರಿ ಏಕಾಏಕಿ ಶಶಿರಾಜ್ ನನ್ನು ಬಂಧಿಸಿದ್ದಾರೆ.
ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಪಕ್ಷ ಕೀಳುಮಟ್ಟದ ರಾಜಕಾರಣವನ್ನು ಪೊಲೀಸ್ ಇಲಾಖೆಯ ಮೂಲಕ ಮಾಡಿಸುತ್ತಿದೆ. ಇದನ್ನು ಖಂಡಿಸಿದ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕಾರ್ಯಕರ್ತರೊಂದಿಗೆ ಮುತ್ತಿಗೆ ಹಾಕಿ ಪ್ರತಿಭಟನಾ ಧರಣಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷದ ಏಜೆಂಟರಂತೆ ವರ್ತಿಸುತ್ತಿರುವ ಪೊಲೀಸ್ ಇಲಾಖೆಯ ದೌರ್ಜನ್ಯದ ವಿರುದ್ಧ ಪ್ರತಿಭಟಿಸಿ ಆಕ್ರೋಶ ಹೊರಹಾಕಿದ್ದಾರೆ…