ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬೇಲ್ ಪಡೆದು ಹೊರ ಬಂದಿದ್ದಾರೆ. ನೆನ್ನೆ ತಾನೆ ಬಿಜಿಎಸ್ ಆಸ್ಪತ್ರೆಯಿಂದ ನಟ ದರ್ಶನ್ ಹೊರ ಬಂದು ಕೋರ್ಟ್ಗೆ ಹಾಜರಾಗಿ ಜಾಮೀನು ಪ್ರಕ್ರಿಯೆಯನ್ನು ಪೂರ್ಣ ಗೊಳಿಸದರು. ಇದೀಗ ದರ್ಶನ್ ಬೇಲ್ ಪಡೆದ ಹೊತ್ತಲ್ಲೇ ಮತ್ತೆ ಸಂಕಷ್ಟ ಎದುರಾಗಿದೆ.
ಹೌದು.. ನಟ ದರ್ಶನ್ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಈಗಾಗಲೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆಯನ್ನ ಬೆಂಗಳೂರು ಪೊಲೀಸರು ಸಲ್ಲಿಸಿದ್ದಾರೆ. ದರ್ಶನ್ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಲು ತಯಾರಿ ನಡೆಸಿದ್ದೇವೆ ಎಂದು ಬೆಂಗಳೂರು ಪೊಲೀಸ್ ಕಮೀಷನರ್ ದಯಾನಂದ್ ಹೇಳಿಕೆ ನೀಡಿದ್ದಾರೆ.
ಶೀಘ್ರವೇ ದರ್ಶನ್ ಬೇಲ್ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇವೆ. ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ಸಂಪೂರ್ಣ ವರದಿ ನೀಡುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿ ಕಮೀಷನರ್ ದಯಾನಂದ್ ಹೇಳಿಕೆ ನೀಡಿದ್ದಾರೆ. ಹಾಗೇನಾದರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದರೆ ನಟ ದರ್ಶನ್ ಗೆ ಮತ್ತೆ ಶುರುವಾಗುತ್ತೆ ಜೈಲು ಸಂಕಷ್ಟ. ಸುಪ್ರೀಂಕೋರ್ಟ್ ಗೆ ಹೋದ್ರೆ ದರ್ಶನ್ ಬೇಲ್ ಕ್ಯಾನ್ಸಲ್ ಆಗುವ ನಿರೀಕ್ಷೆ ಇದೆ. ಹೀಗಾಗಿ ದರ್ಶನ್ ಬೇಲ್ ಗೆ ತಡೆ ನೀಡುವಂತೆ ಸುಪ್ರೀಂಕೋರ್ಟ್ ಗೆ ಶೀಘ್ರವೇ ಅರ್ಜಿ ಸಲ್ಲಿಸಲಿದ್ದಾರೆ ಬೆಂಗಳೂರು ಪೊಲೀಸರು.