ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಸುರಿದ ಮಳೆಗೆ ಸಿಟಿ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ. ನಗರದಲ್ಲಿ ಸರಾಸರಿ 36 ಮಿ.ಮೀ. ಮಳೆ ದಾಖಲಾಗಿದೆ. ಸಾಕಷ್ಟು ಅವಾಂತರಗಳು ಸಂಭವಿಸಿವೆ. ಸದ್ಯ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಮೂರ್ನಾಲ್ಕು ದಿನ ಮಳೆ ಮುನ್ಸೂಚನೆ ನೀಡಿದ್ದು, ಜನ ಜಾಗ್ರತೆಯಿಂದ ಇರಬೇಕಿದೆ.
ಬಂಗಾಳಕೊಲ್ಲಿಯ ಟರ್ಫ್ ಎಫೆಕ್ಟ್ನಿಂದ ಬೆಂಗಳೂರಿನಲ್ಲಿ ಕಳೆದ ಎರಡ್ಮೂರು ದಿನದಿಂದ ಮಳೆಯಾಗುತ್ತಿದೆ. ಕತ್ತಲಾಗುತ್ತಿದ್ದಂತೆ ಎಂಟ್ರಿಯಾಗುವ ಮಳೆಯ ಆರ್ಭಟಕ್ಕೆ ರಾಜಧಾನಿಯಲ್ಲಿ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಸದ್ಯ ನಿನ್ನೆ ರಾತ್ರಿ ಸುರಿದ ಮಳೆಯಿಂದ ನಗರದಲ್ಲಿ ರಸ್ತೆಗಳು ಹೊಳೆಯಂತಾಗಿವೆ. ತಡೆಗೋಡೆ ಕುಸಿದು ಅಪಾರ್ಟ್ಮೆಂಟ್ ಒಳಗೆ ನೀರು ನುಗ್ಗಿದೆ. ನಗರದಲ್ಲಿ ಸರಾಸರಿ 36 ಮಿ.ಮೀ. ಮಳೆ ದಾಖಲಾಗಿದ್ದು, ಜನಜೀವನ ತತ್ತರಿಸಿದೆ.
ಯಾವ್ಯಾವ ಭಾಗದಲ್ಲಿ ಎಷ್ಟು ಮಳೆ?
- ಕೊಟ್ಟೆಗೆಪಾಳ್ಯ ; 113 ಮಿ.ಮೀ
- ಹಂಪಿನಗರ : 108 ಮಿ.ಮೀ
- ನಾಗಪುರ : 107.5 ಮಿ.ಮೀ
- ಚೌಡೇಶ್ವರಿ : 79.5 ಮಿ.ಮೀ
- ಮಾರುತಿಮಂದಿರ : 75.5 ಮಿ.ಮೀ
- ನಂದಿನಿ ಲೇಔಟ್ : 71.5 ಮಿ.ಮೀ
- ರಾಜಾಜಿನಗರ : 59 ಮಿ.ಮೀ
- ನಾಯಂಡಹಳ್ಳಿ : 46 ಮಿ.ಮೀ
- HAL ಏರ್ಪೋರ್ಟ್ : 45 ಮಿ.ಮೀ
- ವಿದ್ಯಾರಣ್ಯಪುರ : 45 ಮಿ.ಮೀ
- ಪುಟ್ಟೇನಹಳ್ಳಿ : 42.5 ಮಿ.ಮೀ
- RR ನಗರ : 42.5 ಮಿ.ಮೀ
- ರಾಜಮಹಲ್ ಗುಟ್ಟಹಳ್ಳಿ : 42.5 ಮಿ.ಮೀ
- ಸೇರಿದಂತೆ ಸರಾಸರಿ 36 ಮಿ.ಮೀ ಮಳೆ ದಾಖಲು