ನಗರ ಪೂರ್ವ ಸಂಚಾರ ವಿಭಾಗದ ಪೊಲೀಸರು ಸಂಚಾರ ನಿಯಮ ಉಲ್ಲಂಘಿಸಿದ ಸವಾರರು/ಚಾಲಕರ ವಿರುದ್ಧ 2,127 ಪ್ರಕರಣ ದಾಖಲಿಸಿ, 10.63 ಲಕ್ಷ ದಂಡ ವಸೂಲಿ ಮಾಡಿದ್ದಾರೆ. ಭಾನುವಾರ ನಗರ ಪೂರ್ವ ಸಂಚಾರ ವಿಭಾಗದ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆದಿದೆ. ಕರೆದಲ್ಲಿಗೆ ಬಾಡಿಗೆ ಬಾರದಿರುವುದು, ಹೆಚ್ಚುವರಿ ದರಕ್ಕೆ ಬೇಡಿಕೆ, ದೋಷಪೂರಿತ ಸೈಲೆನ್ಸರ್, ಬ್ಲಾಕ್ ಫಿಲ್ಟ್, ಟ್ರಾಫಿಕ್ ಸಿಗ್ನಲ್ ಜಂಪ್, ನೋ ಪಾರ್ಕಿಂಗ್, ನೋ ಎಂಟ್ರಿ, ಏಕಮುಖ ಸಂಚಾರ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ, ಪಾದಚಾರಿ ಮಾರ್ಗದಲ್ಲಿ ವಾಹನ ನಿಲುಗಡೆ, ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ, ಹೆಲೈಟ್, ಸೀಟ್ ಬೆಲ್ಟ್ ಧರಿಸದಿರುವುದು ಸೇರಿದಂತೆ ವಿವಿಧ ಸಂಚಾರ ನಿಯಮ ಉಲ್ಲಂಘನೆ ಮಾಡಿದ ಸವಾರರು/ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಸೂಲಿ ಮಾಡಿದ್ದಾರೆ. ಈ ವಿಶೇಷ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ನಗರ ಸಂಚಾರ ಪೂರ್ವ ವಿಭಾಗದ ಡಿಸಿಪಿ ಕುಲದೀಪ್ ಕುಮಾರ್ ಆರ್.ಜೈನ್ ತಿಳಿಸಿದ್ದಾರೆ.