ರಾತ್ರಿ ಅಂತ್ಯಸಂಸ್ಕಾರ ಮಾಡಿದ್ದ ಮಗುವಿನ ಮೃತದೇಹ ಬೆಳಗಾಗುವಷ್ಟರಲ್ಲಿ ಮರದ ಮೇಲೆ ಕಪ್ಪು ಬಣ್ಣದ ಸೀರೆಯ ಜೋಕಾಲಿಯಲ್ಲಿ ಪ್ರತ್ಯಕ್ಷಗೊಂಡ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದ್ದು ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಬಸವಕಲ್ಯಾಣ ತಾಲ್ಲೂಕಿನ ಮಂಠಾಳ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಂಬಯ್ಯಸ್ವಾಮಿ ಎಂಬುವರ ಒಂದೂವರೆ ವರ್ಷದ ಹೆಣ್ಣುಮಗು ದೀಪ್ತಿ ಅನಾರೋಗ್ಯದಿಂದ ಸಾವನ್ನಪ್ಪಿತ್ತು. ತಡರಾತ್ರಿ ಅಂತ್ಯಸಂಸ್ಕಾರ ನೆರವೇರಿಸಿ ಕುಟುಂಬಸ್ಥರು ಮನೆಗೆ ವಾಪಸಾಗಿದ್ದರು. ಆದರೆ ಮರುದಿನ ಬೆಳಗ್ಗೆ ಪಕ್ಕದಲ್ಲೇ ಇದ್ದ ಮರದಲ್ಲಿ ಕಟ್ಟಿದ್ದ ಜೋಕಾಲಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮಾಟ ಮಂತ್ರ ಮಾಡುವವರು ಹೀಗೆ ಮಾಡಿರಬಹುದೆಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದು ಮಗುವಿನ ಶವವನ್ನು ಮತ್ತೆ ಅದೇ ಸ್ಥಳದಲ್ಲಿ ಅಂತ್ಯ ಸಂಸ್ಕಾರ ಮಾಡಿದ್ದಾರೆ.