ಅರಣ್ಯ, ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಬ್ಯಾಂಕ್ ರಾಬರಿ ಸಂದರ್ಭದಲ್ಲಿ ದರೋಡೆಕೋರರ ಗುಂಡೇಟಿಗೆ ಬಲಿಯಾದ ಬೆಮಲಖೇಡ ಗ್ರಾಮದ ಗಿರಿ ವೆಂಕಟೇಶ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
ಸರಕಾರದ ಬ್ಯಾಂಕ್ ಹಣವನ್ನು ಕಾಪಾಡುವ ನಿಟ್ಟಿನಲ್ಲಿ ಬಲಿಯಾದ ಗಿರಿ ವೆಂಕಟೇಶ ಕುಟುಂಬಕ್ಕೆ ಸರಕಾರ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ದೊರಕಬೇಕಾದ ಎಲ್ಲ ಸಹಾಯ ಸವಲತ್ತುಗಳನ್ನು ದೊರಕಿಸಿಕೊಡುವುದಾಗಿ ಸಚಿವ ಈಶ್ಚರ ಖಂಡ್ರೆ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಕುಟುಂಬಕ್ಕೆ ಹೆಚ್ಚುವರಿಯಾಗಿ 10 ಲಕ್ಷ ರೂ.ಗಳನ್ನು ದೊರಕಿಸಲು ಕ್ರಮ ಕೈ ಗೊಳ್ಳುತ್ತೇನೆ ಎಂದು ಈಶ್ವರ್ ಖಂಡ್ರೆ ಹೇಳಿದ್ದಾರೆ.
ಸಮಾಜ ಕಲ್ಯಾಣ ಇಲಾಖೆಯಿಂದ 8 ಲಕ್ಷ ರೂ. ಪರಿಹಾರ ಹಾಗೂ ಅವರ ತಾಯಿಗೆ 5 ಸಾವಿರ ಮಾಸಾಶನ ಹಾಗೂ ಕುಟುಂಬದ ಸದಸ್ಯರೊಬ್ಬರಿಗೆ ಸಮಾಜ ಕಲ್ಯಾಣ ಇಲಾಖೆಯಡಿ ಹೊರಗುತ್ತಿಗೆ ಆಧಾರದಲ್ಲಿ ಉದ್ಯೋಗ ನೀಡುವ ಭರವಸೆಯನ್ನು ಸಚಿವ ಈಶ್ವರ ಖಂಡ್ರೆ ಕುಟುಂಬಕ್ಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ ಸೇರಿದಂತೆ ಹಲವು ಸ್ಥಳಿಯ ಮುಖಂಡರು ಉಪಸ್ಥಿತಿ..