ಬೀದರ್: ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆಗೆ ಕ್ಷಣಗಣನೆ ಶುರುವಾಗಿದೆ. ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಯ ವೇಳೆ ಬಾಗಲಕೋಟೆಯಲ್ಲಿ ಚುನಾವಣಾ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಇದೀಗ ಎರಡನೇ ಹಂತದ ಮತದಾನ ಪ್ರಕ್ರಿಯೆ ಆರಂಭಕ್ಕೂ ಮುನ್ನವೇ ಮತ್ತೊಂದು ಹೃದಯಾಘಾತ ಪ್ರಕರಣ ದಾಖಲಾಗಿದೆ.
ಬೀದರ್ನ ಚಿಟಗುಪ್ಪ ತಾಲೂಕಿನ ಕೋಡಂಬಲ್ ಚೆಕ್ಪೋಸ್ಟ್ನಲ್ಲಿ ಚುನಾವಣಾ ಕರ್ತವ್ಯ ನಿರತ ಸಹಾಯಕ ಕೃಷಿ ಅಧಿಕಾರಿ ಆನಂದ ( 32) ಎಂಬುವವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಆನಂದ ನಿರ್ಣಾ ಗ್ರಾಮದ ರೈತ ಸಂಪರ್ಕ ಕಚೇರಿಯಲ್ಲಿ ಸಹಾಯಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಚುನಾವಣೆ ಹಿನ್ನೆಲೆಯಲ್ಲಿ ಎಸ್ಎಸ್ಟಿ ತಂಡದ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅಸ್ವಸ್ಥರಾಗಿದ್ದಾರೆ. ಕೂಡಲೇ ಆನಂದ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಕೋಡಂಬಲ್ ಚೆಕ್ಪೋಸ್ಟ್ನಿಂದ ಹುಮನಾಬಾದ್ ತಾಲೂಕು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಆನಂದ ನಿಧನರಾಗಿದ್ದಾರೆ.