ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ದಿನದಿಂದ ದಿನಕ್ಕೆ ಹೊದ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಕನ್ನಡದ ಗೀತಾ ಸೀರಿಯಲ್ ಮೂಲಕವೇ ಅತಿ ಹೆಚ್ಚು ಜನಪ್ರಿಯತೆ ಪಡೆದುಕೊಂಡ ಭವ್ಯಾ ಗೌಡ ಬಿಗ್ಬಾಸ್ನಲ್ಲಿ ಕಮಾಲ್ ಮಾಡುತ್ತಿದ್ದಾರೆ.
ಬಿಗ್ಬಾಸ್ ಮನೆಗೆ ಮೊದಲ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟರುವ ಭವ್ಯಾಗೌಡ ಎರಡನೇ ಬಾರಿಗೆ ಕ್ಯಾಪ್ಟನ್ ಆಗಿ ಹೊರ ಹೊಮ್ಮಿದ್ದಾರೆ. ಕ್ಯಾಪ್ಟನ್ ಪಟ್ಟಕ್ಕಾಗಿ ಬಿಗ್ ಬಾಸ್ ಮನೆಯ ಸ್ಪರ್ಧಿಗಳು ಕಿತ್ತಾಡುತ್ತಾ ಇರುತ್ತಾರೆ. ಆದ್ರೆ ಈ ಬಾರಿ ಭವ್ಯಾ ಗೌಡ 13 ನೇ ವಾರಕ್ಕೆ ಬಿಗ್ಬಾಸ್ ಮನೆಯ ಕ್ಯಾಪ್ಟನ್ ಆಗಿ ಆಯ್ಕೆಯಾಗಿದ್ದರು. ಇನ್ನು ನಿನ್ನೆಯ ಸಂಚಿಕೆಯಲ್ಲಿ ಬಿಗ್ಬಾಸ್ ಸ್ಪರ್ಧಿಗಳಿಗೆ ಕ್ಯಾಪ್ಟನ್ಸಿ ಟಾಸ್ಕ್ವೊಂದನ್ನು ನೀಡಿದ್ದರು.
ಅದರಲ್ಲಿ ಗೌತಮಿ, ಐಶ್ವರ್ಯಾ, ಭವ್ಯಾ ಗೌಡ, ಚೈತ್ರಾ ಕುಂದಾಪುರ ಹಾಗೂ ಧನರಾಜ್ ಆಯ್ಕೆಯಾಗಿದ್ದರು. ಅದರ ಪೈಕಿ ಕೊನೆಯ ಕ್ಷಣದಲ್ಲಿ ಐಶ್ವರ್ಯಾ ಹಾಗೂ ಭವ್ಯಾ ಗೌಡ ಕ್ಯಾಪ್ಟನ್ಸಿ ಓಟಕ್ಕೆ ಸೆಲೆಕ್ಟ್ ಆಗಿದ್ದರು. ಇದಾದ ಬಳಿಕ ಐಶ್ವರ್ಯಾ ಹಾಗೂ ಭವ್ಯಾ ಗೌಡ ಮಧ್ಯೆ ಪೈಪೋಟಿ ನಡೆದಿತ್ತು. ಇದರಲ್ಲಿ ಭವ್ಯಾ ಗೌಡ ಎರಡನೇ ಬಾರಿಗೆ ಬಿಗ್ಬಾಸ್ ಮನೆಯ ಕ್ಯಾಪ್ಟನ್ ಆಗಿ ಆಯ್ಕೆಯಾಗಿದ್ದಾರೆ.
ಅಲ್ಲದೇ ಭಾನುವಾರದ ಸಂಚಿಕೆಯಲ್ಲಿ ಭವ್ಯಾ ಗೌಡಗೆ ಕಿಚ್ಚ ಸುದೀಪ್ ಸರ್ಪ್ರೈಸ್ ಕೊಟ್ಟಿದ್ದಾರೆ. ಯಾರು ಊಹಿಸಲಾರದಂತೆ ಈ ವಾರದ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡಿದ್ದಾರೆ. ಈ ವಾರ ಒಂದು ವಿಚಿತ್ರ ಆಟದಲ್ಲಿ ಎಲ್ಲ ಕಡೆ ಕಾಣಿಸಿಕೊಂಡಿದ್ದು, ಎಲ್ಲ ಆಟ ಸರಿಯಾಗಿ ಆಡಿದ್ದಾರೆ. ಎಲ್ಲಿ ಮಾತಾಡಬೇಕು ಅಲ್ಲಿ ಮಾತಾಡಿದ್ದಾರೆ. ಎರಡು ಬಾರಿ ಕ್ಯಾಪ್ಟನ್ ಆಗಿದ್ದಾರೆ ಅಂತ ಹೇಳುತ್ತಾ ಈ ವಾರದ ಕಿಚ್ಚ ಚಪ್ಪಾಳೆ ಗಿಟ್ಟಿಸಿಕೊಂಡಿದ್ದಾರೆ.