ಬಿಹಾರದಲ್ಲಿ ಕೇವಲ ಹದಿನೈದು ದಿನಗಳಲ್ಲಿ10 ಸೇತುವೆ ಕುಸಿತವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ಮತ್ತೆರಡು ಸೇತುವೆ ಕುಸಿತಕ್ಕೆ ಸಾಕ್ಷಿಯಾಗಿದ್ದ ಸರನ್ ಎಂಬಲ್ಲಿ ಇತ್ತೀಚಿನ ಘಟನೆ ನಡೆದಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಮನ್ ಸಮೀರ್ ಹೇಳಿದ್ದಾರೆ.
15 ವರ್ಷಗಳ ಹಿಂದೆ ನಿರ್ಮಿಸಿದ ಸೇತುವೆ ಇಂದು ಬೆಳಿಗ್ಗೆ ಕುಸಿದು ಬಿದ್ದಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ. ಗಂಡಕೀ ನದಿಯ ಮೇಲಿನ ಸಣ್ಣ ಸೇತುವೆಯು ಬನೇಯಪುರ ಬ್ಲಾಕ್ನಲ್ಲಿದೆ. ಅದು ಸರನ್ನ ಹಲವಾರು ಹಳ್ಳಿಗಳನ್ನು ನೆರೆಯ ಸಿವಾನ್ ಜಿಲ್ಲೆಯೊಂದಿಗೆ ಸಂಪರ್ಕಿಸುತ್ತದೆ.
ಸಣ್ಣ ಸೇತುವೆಯನ್ನು 15 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದು, ಜಿಲ್ಲಾಡಳಿತದ ಹಲವು ಅಧಿಕಾರಿಗಳು ಈಗಾಗಲೇ ಸ್ಥಳಕ್ಕೆ ತಲುಪಿದ್ದಾರೆ. ಸೇತುವೆ ಕುಸಿತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಇತ್ತೀಚೆಗೆ ಹೂಳು ತೆಗೆಯುವ ಕೆಲಸವನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.