- ನಳಂದ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಉದ್ಘಾಟಿಸಿದ ಮೋದಿ
- ಕ್ಯಾಂಪಸ್ ಉದ್ಘಾಟನೆಗೆ ನಿತೀಶ್ ಕುಮಾರ್, ಎಸ್ ಜೈಶಂಕರ್, 17 ದೇಶಗಳ ರಾಯಭಾರಿಗಳು ಭಾಗಿ
ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದ ರಾಜ್ಗಿರ್ನಲ್ಲಿ ನಳಂದ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್, ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು 17 ದೇಶಗಳ ರಾಯಭಾರಿಗಳು ಭಾಗವಹಿಸಿದ್ದರು.
ನಳಂದ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ಅನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ನಳಂದಾ ವಿಶ್ವವಿದ್ಯಾನಿಲಯದ ಉದ್ಘಾಟನೆಯೊಂದಿಗೆ ಬಿಹಾರವು ತನ್ನ ಕಳೆದುಹೋದ ಪರಂಪರೆಯನ್ನು ಮರಳಿ ಪಡೆದಿದೆ. ವಿಶ್ವವಿದ್ಯಾನಿಲಯವು ನಳಂದದ ಪ್ರಾಚೀನ ಅವಶೇಷಗಳ ಸಮೀಪದಲ್ಲಿದೆ, ಶಿಕ್ಷಣ ಕ್ಷೇತ್ರಕ್ಕೆ ವಿಶೇಷ ದಿನ ಎಂದು ಪ್ರಧಾನಿ ಮೋದಿ ಬಣ್ಣಿಸಿದರು.
ನಳಂದಾ ವಿಶ್ವವಿದ್ಯಾನಿಲಯದ ಉದ್ಘಾಟನೆಗೂ ಮುನ್ನ ಶಿಕ್ಷಣ ಸಂಸ್ಥೆಯ ಹಂಗಾಮಿ ಉಪಕುಲಪತಿ ಪ್ರೊಫೆಸರ್ ಅಭಯ್ ಕುಮಾರ್ ಸಿಂಗ್ ಅವರು ಪ್ರಧಾನಿ ಮೋದಿಯವರನ್ನು ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರಲ್ಲದೆ, ವಿದೇಶಾಂಗ ಸಚಿವ ಜೈಶಂಕರ್, ಬಿಹಾರ ರಾಜ್ಯಪಾಲ ರಾಜೇಂದ್ರ ಅರ್ಲೇಕರ್, ಮುಖ್ಯಮಂತ್ರಿ ನಿತೀಶ್ ಕುಮಾರ್, ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾ ಭಾಗವಹಿಸಿದ್ದಾರೆ. ಇದಲ್ಲದೇ ನಳಂದ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ಉದ್ಘಾಟನಾ ಸಮಾರಂಭದಲ್ಲಿ 17 ದೇಶಗಳ ರಾಯಭಾರಿಗಳು ಭಾಗವಹಿಸಿದ್ದರು.