- ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್ ಮೇಲೆ ಕಲ್ಲು ತೂರಾಟ
- ಲಾಹೌಲ್ ಮತ್ತು ಸ್ಪಿತಿ ಪ್ರದೇಶದಲ್ಲಿ ನಡೆದ ಘಟನೆ
- ಕಪ್ಪು ಬಾವುಟ ಹಿಡಿದು ಕಂಗನಾ ವಿರುದ್ಧ ಗೋ ಬ್ಯಾಕ್ ಘೋಷಣೆ
ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್ ಹಾಗೂ ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ನಿನ್ನೆ ಲಾಹೌಲ್ ಮತ್ತು ಸ್ಪಿತಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಈ ಘಟನೆಯಲ್ಲಿ ಪಕ್ಷದ ಇಬ್ಬರು ಕಾರ್ಯಕರ್ತರು ಗಂಭಿರವಾಗಿ ಗಾಯಗೊಂಡಿದ್ದಾರೆಎಂಮದು ಬಿಜೆಪಿ ದೂರಿದೆ.
ನಿನ್ನೆ ಮಂಡಿ ಲೋಕಸಭಾ ಕ್ಷೇತ್ರದ ಲಾಹೌಲ್ ಮತ್ತು ಸ್ಪಿತಿ ಪ್ರದೇಶಗಳಲ್ಲಿ ಪ್ರಚಾರ ಕಾರ್ಯಕ್ರಮ ಕೈಂಗೊಡಿದ್ದ ಕಂಗನಾ ಅಲ್ಲಿಗೆ ತಲುಪುತ್ತಿದ್ದಂತೆ ಸ್ಥಳೀಯರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಕೈಯಲ್ಲಿ ಕಪ್ಪು ಬಾವುಟ ಹಿಡಿದು ಕಂಗನಾ ವಿರುದ್ಧ ಗೋ ಬ್ಯಾಕ್ ಘೋಷಣೆಗಳನ್ನು ಕೂಗಿದ್ದರು. ಇದಾದ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.