ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಜೆಎಂಎಫ್ಸಿ ಕೋರ್ಟ್ನಿಂದ ಜಾಮೀನು ಮಂಜೂರಾಗಿದೆ. ಪ್ರಕರಣ ಸಂಬಂಧ ಅರುಣ್ ಕುಮಾರ್ ಪುತ್ತಿಲ ಸೋಮವಾರ ವಕೀಲರ ಮೂಲಕ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಪುತ್ತಿಲ ಪರ ವಕೀಲರ ವಾದ ಪುರಸ್ಕರಿಸಿ ಜಾಮೀನು ನೀಡಿದೆ.
ಬೆಂಗಳೂರಿನ ಪೈ ವಿಸ್ತಾ ಹೋಟೆಲ್ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಅರುಣ್ ಪುತ್ತಿಲ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ 47 ವರ್ಷದ ಮಹಿಳೆ ದೂರು ನೀಡಿದ್ದರು. ಫೋಟೋ, ಸೆಲ್ಫಿ ವಿಡಿಯೋ ತೋರಿಸಿ ಬ್ಲ್ಯಾಕ್ಮೇಲ್ ಮಾಡಿದ್ದಾಗಿ ಆರೋಪ ಮಾಡಿದ್ದರು. ಇದರ ಅನ್ವಯ ಪುತ್ತೂರಿನಲ್ಲಿರುವ ದಕ್ಷಿಣ ಕನ್ನಡ ಮಹಿಳಾ ಠಾಣೆಯಲ್ಲಿ ಐಪಿಸಿ ಸೆಕ್ಷನ್ 417, 354A, 506 ರಡಿಯಲ್ಲಿ ಪ್ರಕರಣ ದಾಖಲಾಗಿತ್ತು. 2023 ಜೂನ್ನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ನಲ್ಲಿ ದೌರ್ಜನ್ಯ ನಡೆಸಿದ್ದಾಗಿ ಸಂತ್ರಸ್ತೆ ಆರೋಪಿಸಿದ್ದರು.