ಪಂಚಮಸಾಲಿ ಮೀಸಲಾತಿ ಹೋರಾಟಗಾರ ಮೇಲೆ ಲಾಠಿ ಚಾರ್ಜ್ ಪ್ರಕರಣ ಬೆಳಗಾವಿಯ ವಿಧಾನಸಭೆ ಹಾಗೂ ವಿಧಾನಪರಿಷತ್ನಲ್ಲಿ ಭಾರೀ ಸದ್ದು ಮಾಡಿದೆ. ಈ ಸಂಬಂಧ ಸದನದಲ್ಲಿ ವಿಪಕ್ಷ ಬಿಜೆಪಿ ಹಾಗೂ ಆಡಳಿತ ಪಕ್ಷ ಕಾಂಗ್ರೆಸ್ ನಡುವೆ ವಾಕ್ ಸಮರ ನಡೆದಿದೆ. ಇದರಿಂದ ಸ್ಪೀಕರ್ ಯುಟಿ ಖಾದ್ ಅವರು ಸದನವನ್ನು ಮುಂದೂಡಿದರು. ಇದರಿಂದ ಬಿಜೆಪಿ ಸದಸ್ಯರು ಸ್ಪೀಕರ್ ಜೊತೆ ಜಗಳ ಮಾಡಿದ್ದಾರೆ. ಸ್ಪೀಕರ್ ಕಚೇರಿಯಲ್ಲಿ ಖಾದರ್ ಜೊತೆ ಏರು ಧ್ವನಿಯಲ್ಲೇ ಕೂಗಾಟ ನಡಸಿದ್ದಾರೆ.
ವಿಪಕ್ಷ ನಾಯಕ ಅಶೋಕ್, ಶಾಸಕ ಸುನೀಲ್ ಕುಮಾರ್, ವಿಜಯೇಂದ್ರ, ಅರವಿಂದ್ ಬೆಲ್ಲದ್, ಸಿದ್ದು ಸವದಿ, ಸುರೇಶ್ ಗೌಡ ಸೇರಿದಂತೆ ಬಿಜೆಪಿ ಶಾಸಕರು ಸ್ಪೀಕರ್ ಕಚೇರಿಯಲ್ಲಿ ಖಾದರ್ ಅವರ ಜೊತೆ ವಾಗ್ವಾದ ನಡೆಸಿದ್ದಾರೆ. ಬಿಜೆಪಿ ಜಗಳದ ವಿಷಯ ತಿಳಿಯುತ್ತಿದ್ದಂತೆಯೇ ಸಚಿವರು ಮತ್ತು ಕಾಂಗ್ರೆಸ್ ಶಾಸಕರು ಸ್ಪೀಕರ್ ಇದ್ದ ಸ್ಥಳಕ್ಕೆ ಆಗಮಿಸಿ ಖಾದರ್ ಬೆಂಬಲಕ್ಕೆ ನಿಂತಿದ್ದಾರೆ. ಹೀಗಾಗಿ ಎರಡೂ ಕಡೆಯಿಂದ ವಾಗ್ವಾದ ಮಿತಿ ಮೀರಿದ ಪರಿಣಾಮ ಸ್ಪೀಕರ್ ಕಚೇರಿಯಲ್ಲಿ ಪರಿಸ್ಥಿತಿ ಗಂಭಿರವಾಗಿತ್ತು.