ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಗಿದ್ದ ಎಫ್ಐಆರ್ ದಾಖಲಾಗಿತ್ತು. ಇದೀಗ ಕರ್ನಾಟಕ ಹೈಕೋರ್ಟ್ ಕೇಸ್ ಅನ್ನು ರದ್ದುಗೊಳಿಸಿದೆ.
ಯತ್ನಾಳ್ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರುದ್ದು ಕೋರಿ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠ, ವಾದ-ಪ್ರತಿವಾದ ಬಳಿಕ ತೀರ್ಪು ಕಾಯ್ದಿರಿಸಿತ್ತು. ಆದರೆ ಇಂದು ಎಫ್ಐಆರ್ ರದ್ದುಗೊಳಿಸಿ ತೀರ್ಪು ಪ್ರಕಟಗೊಳಿಸಿದೆ.
ರಾಹುಲ್ ಗಾಂಧಿ ಜನನದ ಬಗ್ಗೆ ಯತ್ನಾಳ್ ಹೇಳಿಕೆ ನೀಡಿದ್ದರು. ಹೀಗಾಗಿ ಅವರ ವಿರುದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ಅವರು ದೂರು ಸಲ್ಲಿಸಿದ್ದರು. ದೂರಿನ ಆಧಾರದ ಮೇಲೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
Continue Reading