ದೇಶದಾದ್ಯಂತ ಸಿಆರ್ಪಿಎಫ್ ಶಾಲೆಗಳು ಸೇರಿದಂತೆ ದೇಶೀಯ ಮತ್ತು ಅಂತರರಾಷ್ಟ್ರೀಯ ವಿಮಾನಗಳ ಬಾಂಬ್ ಬೆದರಿಕೆ ಪ್ರಕರಣಗಳು ಮಾಸುವ ಮುನ್ನವೇ ಆಂಧ್ರಪ್ರದೇಶದ ತಿರುಪತಿ ದೇವಸ್ಥಾನ ಸಮೀಪದ ಮೂರು ಪ್ರಮುಖ ಹೋಟೆಲ್ಗಳಿಗೆ ನೆನ್ನೆ ಬಾಂಬ್ ಬೆದರಿಕೆ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಮೂರು ಪ್ರಮುಖ ಹೋಟೆಲ್ಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಈ ಕುರಿತು ಎಫ್ಐಆರ್ ದಾಖಲಿಸಲಾಗಿದ್ದು, ವಿವಿಧ ಅಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ’ ಎಂದು ತಿರುಪತಿ ಪೂರ್ವ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶ್ರೀನಿವಾಸುಲು ತಿಳಿಸಿದ್ದಾರೆ.
ಇದನ್ನೂ ಓದಿ: ಜಾರ್ಖಂಡ್ ಚುನಾವಣೆಗೆ “ಧೋನಿ” ಬ್ರಾಂಡ್ ಅಂಬಾಸಿಡರ್..!
‘ಮೂರು ಹೋಟೆಲ್ಗಳಲ್ಲೂ ಬಾಂಬ್ ನಿಷ್ಕ್ರಿಯ, ಬಾಂಬ್ ಪತ್ತೆ ದಳ ಹಾಗೂ ಶ್ವಾನ ದಳದ ಸಿಬ್ಬಂದಿ ಪರಿಶೀಲನೆ ನಡೆಸಿದ್ದು, ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕಳೆದ 11 ದಿನಗಳಲ್ಲಿ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಸೇರಿದ ದೇಶೀಯ ಮತ್ತು ಅಂತರರಾಷ್ಟ್ರೀಯ 250 ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿದ್ದವು. ಏರ್ ಇಂಡಿಯಾ, ವಿಸ್ತಾರಾ ಮತ್ತು ಇಂಡಿಗೊ ಸಂಸ್ಥೆಗಳ ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆಗಳು ಬಂದಿದ್ದವು.