ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆಯ ಸಂದೇಶ ಬಂದಿದೆ. ಇ-ಮೇಲ್ ಕಳುಹಿಸುವ ಮೂಲಕ ವಿಮಾನ ನಿಲ್ದಾಣಕ್ಕೆ ಬೆದರಿಕೆ ಸಂದೇಶ ಬಂದಿದೆ. ಚೆನ್ನೈಯಿಂದ ಅಪರಿಚಿತ ಬೆದರಿಕೆಯ ಇ- ಮೇಲ್ ಸಂದೇಶ ವಿಮಾನ ನಿಲ್ದಾಣದ ನಿರ್ದೇಶಕ ತ್ಯಾಗರಾಜ್ ಅವರ ಇ-ಮೇಲ್ ಗೆ ಭಾನುವಾರ ರವಾನೆಯಾಗಿದೆ.
ವಿಮಾನ ನಿಲ್ದಾಣದ ಪ್ರದೇಶದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಇ-ಮೇಲ್ ಬಂದ ಹಿನ್ನಲೆಯಲ್ಲಿ ಅಲರ್ಟ್ ಆದ ಪೊಲೀಸ್ ಇಲಾಖೆ ವಿಮಾನ ನಿಲ್ದಾಣಕ್ಕೆ ಭದ್ರತೆಯನ್ನ ಹೆಚ್ಚಿಸಿದೆ. ಶ್ವಾನದಳ, ಬಾಂಬ್ ನಿಷ್ಕ್ರೀಯ ದಳದಿಂದ ವಿಮಾನ ನಿಲ್ದಾಣದಲ್ಲಿ ಪರಿಶೀಲನೆಯನ್ನ ನಡೆಸಲಾಗಿದೆ. ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಬೆದರಿಕೆ ಪತ್ರದ ಬಗ್ಗೆ ಪ್ರಕರಣ ದಾಖಲಾಗಿದೆ.