ಕೋವಿಶೀಲ್ಡ್ ಔಷಧಿಯಿಂದಾಗುವ ಅಡ್ಡಪರಿಣಾಮಗಳ ಬಗ್ಗೆ ಕೊರೊನಾ ಔಷಧಗಳ ತಯಾರಿಕಾ ಸಂಸ್ಥೆ ಅಸ್ಟ್ರಾಜೆನೆಕಾ ಮೊದಲ ಬಾರಿಗೆ ಕೋರ್ಟ್ ಮುಂದೆ ಒಪ್ಪಿಕೊಂಡಿದೆ. ಅಸ್ಟ್ರಾಜೆನೆಕಾ ಕೋವಿಡ್ ಲಸಿಕೆ ಪಡೆದ ಬಳಿಕ ಮೆದುಳು ಅಥವಾ ದೇಹದ ಇತರೆ ರಕ್ತನಾಳಗಳಲ್ಲಿ ರಕ್ತಹೆಪ್ಪುಗಟ್ಟುವುದು. ಪ್ಲೇಟ್ ಲೆಟ್ಗಳ ಸಂಖ್ಯೆ ಕಡಿಮೆಯಾಗುವುದರ ಬಗ್ಗೆ ಬ್ರಿಟನ್ ನಿವಾಸಿ ಜೆಮಿ ಸ್ಕಾಟ್ ದೂರು ನೀಡಿದ್ದರು.
ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ತನ್ನ ಲಸಕೆಯಿಂದ ಅಪರೂಪದ ಪ್ರಕರಣಗಳಲ್ಲಿ ಅಡ್ಡಪರಿಣಾಮ ಉಂಟಾಗಬಹುದು. ಆದರೆ ಲಸಿಕೆ ಪಡೆಯದವರಲ್ಲೂ ಟಿಟಿಎಸ್ ಕಾಣಿಸಿಕೊಳ್ಳಬಹುದು. ಆದ್ದರಿಂದ ಈ ಕುರಿತು ಅಧ್ಯಯನದ ಅಗತ್ಯವಿದೆ ಎಂದು ಅಸ್ಟ್ರಾಜೆನೆಕಾ ಪ್ರತಿಪಾದಿಸಿದೆ. ಇದೇ ಆಸ್ಟ್ರಾಜೆನೆಕಾ ಲಸಿಕೆಯನ್ನೇ ಭಾರತದ ಪುಣೆ ಮೂಲ ಸೀರಂ ಇನ್ಸ್ಟಿಟ್ಯೂಟ್ ಕೋವಿಶೀಲ್ಡ್ ಹೆಸರಲ್ಲಿ ಭಾರತದಲ್ಲಿ ಬಿಡುಗಡೆ ಮಾಡಿತ್ತು. ಭಾರತದಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ನೀಡಿದ್ದ ಲಸಿಕೆ ಕೂಡಾ ಇದೇ. ಲಂಡನ್ ನ್ಯಾಯಾಲಯದಲ್ಲಿ ಆಸ್ಟ್ರಾಜೆನೆಕಾ ನೀಡಿದ ಹೇಳಿಕೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ.