ಚಿನ್ನ ಮತ್ತು ಬೆಳ್ಳಿ ಬೆಲೆಗಳ ಸಾರ್ವಕಾಲಿಕ ಹೆಚ್ಚಳದ ಹಾದಿ ಮುಂದುವರಿಯುತ್ತಿದೆ. ನಿನ್ನೆ ಗ್ರಾಮ್ಗೆ 20 ರೂನಷ್ಟು ಹೆಚ್ಚಾಗಿದ್ದ ಚಿನ್ನದ ಬೆಲೆ ಇಂದು ಮಂಗಳವಾರ ಅಲ್ಪ ಹೆಚ್ಚಳ ಕಂಡಿದೆ. ಗ್ರಾಮ್ಗೆ ಒಂದು ರೂ ಮಾತ್ರ ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ ಅಲ್ಪ ಹೆಚ್ಚಳವಾಗಿದೆ. ದುಬೈ, ಶಾರ್ಜಾ ಇತ್ಯಾದಿ ಯುಎಇ ನಗರಗಳಲ್ಲಿ ಚಿನ್ನದ ಬೆಲೆ ಮೊದಲ ಬಾರಿಗೆ 3,000 ಡಿರಾಮ್ ಮೌಲ್ಯದ ಗಡಿದಾಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 73,010 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 79,650 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,110 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 73,010 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,690 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 22ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,010 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 79,650 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 59,740 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 101.10 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,010 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 79,650 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 969 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
ಬೆಂಗಳೂರು: 73,010 ರೂ
ಚೆನ್ನೈ: 73,010 ರೂ
ಮುಂಬೈ: 73,010 ರೂ
ದೆಹಲಿ: 73,160 ರೂ
ಕೋಲ್ಕತಾ: 73,010 ರೂ
ಕೇರಳ: 73,010 ರೂ
ಅಹ್ಮದಾಬಾದ್: 73,060 ರೂ
ಜೈಪುರ್: 73,160 ರೂ
ಲಕ್ನೋ: 73,160 ರೂ
ಭುವನೇಶ್ವರ್: 73,010 ರೂ