ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ಮುಡಾದಿಂದ ಅಕ್ರಮವಾಗಿ ಸೈಟ್ ಪಡೆದ ಆರೋಪಕ್ಕೆ ಸಂಬಂಧಿಸಿ ರಾಜ್ಯಪಾಲರು ನೀಡಿರುವ ಶೋಕಾಸ್ ನೋಟಿಸ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ. ಉತ್ತರ ನೀಡುವುದರ ಜೊತೆಗೆ ರಾಜ್ಯಪಾಲರಿಗೆ ಸಮರ್ಪಕವಾದ ದಾಖಲೆ ಸಲ್ಲಿಕೆ ಮಾಡಿದ್ದಾರೆ. ಆದರೆ, ಇದು ರಾಜ್ಯಪಾಲರ ನೋಟಿಸ್ಗೆ ಸಚಿವ ಸಂಪುಟದಲ್ಲಿ ತೆಗೆದುಕೊಂಡ ನಿರ್ಣಯವನ್ನು ಒಳಗೊಂಡಿಲ್ಲ.
ಪ್ರತ್ಯೇಕವಾಗಿ, ವೈಯಕ್ತಿಕವಾಗಿ ದಾಖಲೆಗಳ ಸಮೇತ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರಿಗೆ ವಿವರಣೆ ನೀಡಿದ್ದಾರೆ. ತಮಗೇ ನೇರವಾಗಿ ನೋಟಿಸ್ ನೀಡಿದ ಪರಿಣಾಮ ರಾಜ್ಯಪಾಲರಿಗೆ ಖುದ್ದು ಸಿಎಂ ವಿವರಣೆ ನೀಡಿದ್ದಾರೆ. ಅಲ್ಲದೆ, ರಾಜ್ಯಪಾಲರು ನೋಟಿಸ್ನಲ್ಲಿ ಉಲ್ಲೇಖಸಿರುವ ಆರೋಪಗಳನ್ನು ಸಿಎಂ ನಿರಾಕರಿಸಿದ್ದಾರೆ.
ಮುಡಾ ಸೈಟ್ ಹಂಚಿಕೆ ವಿಚಾರದಲ್ಲಿ ನನ್ನ ಪಾತ್ರವಿಲ್ಲ. ಯಾವುದೇ ಪ್ರಭಾವವನ್ನೂ ಬಳಸಿಲ್ಲ. ಕಾನೂನಾತ್ಮಕವಾಗಿಯೇ ಪತ್ನಿಗೆ ಸೈಟ್ ಹಂಚಿಕೆಯಾಗಿದೆ ಎಂದಿರುವ ಸಿದ್ದರಾಮಯ್ಯ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಉತ್ತರದ ಜತೆ ಕಳುಹಿಸಿಕೊಟ್ಟಿದ್ದಾರೆ.