- ಸ್ಯಾಂಡಲ್ ವುಡ್ ನಲ್ಲಿ ‘ಸಿ’ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ
- “ಸಿ” ಟೀಮ್ ಗೆ ಧ್ರುವ ಸರ್ಜಾ ಸಾಥ್
- ‘ಸಿ’ ಚಿತ್ರದ ಹಾಡೊಂದನ್ನು ಧ್ರುವ ಸರ್ಜಾ ಅವರಿಂದ ರಿಲೀಸ್
‘ಸಿ’ ಸ್ಯಾಂಡಲ್ ವುಡ್ ನಲ್ಲಿ ರಿಲೀಸ್ ಗೆ ರೆಡಿಯಾಗಿರುವ ಹೊಸ ಸಿನಿಮಾ. ಕಿರಣ್ ಸುಬ್ರಮಣಿ ಚೊಚ್ಚಲ ನಿರ್ದೇಶನದ ‘ಸಿ’ ಸಿನಿಮಾ ಶೂಟಿಂಗ್ ಮುಗಿಸಿ ಪ್ರಮೋಷನ್ ನಲ್ಲಿ ಬ್ಯುಸಿಯಾಗಿದೆ. ಸದ್ಯದಲ್ಲೇ ಥಿಯೇಟರ್ ಅಂಗಳಕ್ಕೆ ಲಗ್ಗೆ ಇಡಲಿದೆ. ಇದೀಗ “ಸಿ” ಟೀಮ್ ಗೆ ಧ್ರುವ ಸರ್ಜಾ ಸಾಥ್ ಕೊಟ್ಟಿದ್ದಾರೆ.
‘ಸಿ’ ಚಿತ್ರದ ಹಾಡೊಂದನ್ನು ಧ್ರುವ ಸರ್ಜಾ ರಿಲೀಸ್ ಮಾಡಿದ್ದಾರೆ. ಅಪ್ಪ ಮಗಳ ಬಾಂಧವ್ಯದ ಹಾಡು ಈಗ ಗಾನ ಪ್ರಿಯರ ಗಮನ ಸೆಳೆಯುತ್ತಿದೆ. ಕಿರಣ್ ಸುಬ್ರಮಣಿ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಮಿಂಚಿದ್ದಾರೆ. ಅಪ್ಪ ಮಗಳ ಬಾಂಧವ್ಯದ ಹಾಡಿನಲ್ಲಿ ಕಿರಣ್ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಕಂದಾ…ಕಂದಾ ಎನ್ನುವ ಸಾಲಿನಿಂದ ಪ್ರಾರಂಭವಾಗುವ ಈ ಹಾಡನ್ನು ಹೃದಯ ಶಿವ ಬರೆದಿದ್ದು, ಗಾಯಕ ವಾಸುಕಿ ವೈಭವ್ ಹಾಡಿದ್ದಾರೆ.
“ಸಿ” ಸಿನಿಮಾ ತಂದೆ- ಮಗಳ ಬಾಂಧವ್ಯದ ಜೊತೆಗೆ ಮೆಡಿಕಲ್ ಮಾಫಿಯಾದ ಬಗ್ಗೆ ಇದೆ. ಎಜಿಎಸ್ ಪ್ರೊಡಕ್ಷನ್ ನಡಿ ನಿರ್ದೇಶಕ, ನಾಯಕ ಕಿರಣ್ ಅವರ ತಂದೆ ಸುಬ್ರಮಣಿ ಅವರು ನಿರ್ಮಾಣ ಮಾಡಿದ್ದಾರೆ.
ಈಗಾಗಲೇ ಹಾಡಿನ ಮೂಲಕ ಗಮನ ಸೆಳೆಯುತ್ತಿರುವ “ಸಿ” ಸಿನಿಮಾ ಸದ್ಯದಲ್ಲೇ ರಿಲೀಸ್ ಡೇಟ್ ಅನೌನ್ಸ್ ಮಾಡಲಿದೆ.