ಈ ಬಾರಿಯ ಬಜೆಟ್ನಲ್ಲಿ ಇಂಧನ, ರೈಲು, ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಹೈದರಾಬಾದ- ಬೆಂಗಳೂರು ಕೈಗಾರಿಕಾ ಕಾರಿಡಾರ್ ನಿರ್ಮಾಣ ಮಾಡುವುದಾಗಿ ಬಜೆಟ್ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ವಿಶಾಖಪಟ್ಟಣ- ಚೆನ್ನೈ ಕೈಗಾರಿಕಾ ಕಾರಿಡಾರ್ ಕೂಡ ಘೋಷಣೆಯಾಗಿದೆ.
26 ಸಾವಿರ ಕೋಟಿ ವೆಚ್ಚದಲ್ಲಿ ರೈಲು ಯೋಜನೆಗಳ ಆರಂಭ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲಾಗುವುದು ಎಂದು ವಿತ್ತ ಸಚಿವೆ ಹೇಳಿದ್ದಾರೆ. ಇಂಧನ, ರೈಲು, ರಸ್ತೆ ಅಭಿವೃದ್ಧಿಗಾಗಿ ಆದ್ಯತೆ ನೀಡಲಾಗುವುದು, ಪೋಲಾವರಂ ಪ್ರಾಜೆಕ್ಟ್ಗೆ ಕೇಂದ್ರ ಸರ್ಕಾರದಿಂದ ಅನುದಾನ ಘೋಷಣೆಯಾಗಿದೆ.