ಮೂಗಿನಲ್ಲಿ ರಕ್ತಸ್ರಾವ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲೆಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾದ ಸುದ್ದಿ ಮಾಧ್ಯಮಗಳಲ್ಲಿ ನೋಡಿದೆ. ಚಿಕಿತ್ಸೆ ಪಡೆಯುತ್ತಿರುವ ಕುಮಾರಸ್ವಾಮಿ ಅವರು ಶೀಘ್ರ ಚೇತರಿಸಿಕೊಂಡು ಮತ್ತೆ ತಮ್ಮ ಕರ್ತವ್ಯದಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದು ಹಾರೈಸುತ್ತೇನೆ ಎಂದು ಸಿ.ಎಂ ಪೋಸ್ಟ್ ಮಾಡಿದ್ದಾರೆ.