ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಮಂಡನೆಯಲ್ಲಿ ಸ್ಟಾಂಡರ್ಡ್ ಡಿಡಕ್ಷನ್ ಮೊತ್ತವನ್ನು 50 ಸಾವಿರ ರೂ.ನಿಂದ 75 ಸಾವಿರ ರೂಗೆ ಏರಿಕೆ ಮಾಡಿದ್ದು, ಇದರಿಂದ 4 ಕೋಟಿ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
ಪಿಂಚಣಿದಾರರಿಗೆ 15 ಸಾವಿರ ರೂ.ನಿಂದ 25 ಸಾವಿರ ರೂ.ಗೆ ಏರಿಕೆ ಮಾಡಲಾಗಿದ್ದು, ಸದ್ಯ ಮೂರನೇ 2 ಭಾಗದಷ್ಟು ಜನರು ಹೊಸ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡಿದ್ದಾರೆ ಎಂದು ಹಣಕಾಸು ಸಚಿವರು ತಿಳಿಸಿದ್ದಾರೆ. ತೆರಿಗೆ ವ್ಯವಸ್ಥೆಯ ಬಗ್ಗೆ ಮಾತನಾಡಿದ ನಿರ್ಮಲಾ ಸೀತಾರಾಮನ್, ವಿವಿಧ ಪಾವತಿಗಳಿಗೆ ಐದು ಪ್ರತಿಶತ ಟಿಡಿಎಸ್ ಬದಲಿಗೆ ಎರಡು ಪ್ರತಿಶತ ಟಿಡಿಎಸ್ ಅನ್ನು ಒದಗಿಸಲಾಗುತ್ತದೆ ಎಂದರು.
ಮ್ಯೂಚುವಲ್ ಫಂಡ್ ಅಥವಾ ಯುಟಿಐ ಮರುಖರೀದಿಯಲ್ಲಿ ಟಿಡಿಎಸ್ ಅನ್ನು ಶೇಕಡಾ 20ರಷ್ಟು ಹಿಂಪಡೆಯಲಾಗಿದೆ. ಇ-ಕಾಮರ್ಸ್ ಆಪರೇಟರ್ಗಳಿಗೆ TDS ಅನ್ನು ಶೇಕಡಾ 1 ರಿಂದ 0.1 ಕ್ಕೆ ಇಳಿಸಲಾಗಿದೆ. ಅಲ್ಲದೆ, ಟಿಡಿಎಸ್ ತುಂಬುವಲ್ಲಿ ವಿಳಂಬವನ್ನು ಅಪರಾಧ ಎಂದು ಪರಿಗಣಿಸಲಾಗುವುದಿಲ್ಲ ಎಂದರು.
ಹೊಸ ತೆರಿಗೆ ಸ್ಲ್ಯಾಬ್ಗಳು
3 ಲಕ್ಷದವರೆಗಿನ ಆದಾಯಕ್ಕೆ ತೆರಿಗೆ ಇಲ್ಲ
3 ಲಕ್ಷದಿಂದ 7 ಲಕ್ಷದವರೆಗಿನ ಆದಾಯಕ್ಕೆ ಶೇ.5 ತೆರಿಗೆ
7 ಲಕ್ಷದಿಂದ 10 ಲಕ್ಷದವರೆಗಿನ ಆದಾಯಕ್ಕೆ ಶೇ.10 ತೆರಿಗೆ
10 ಲಕ್ಷದಿಂದ 12 ಲಕ್ಷದವರೆಗಿನ ಆದಾಯಕ್ಕೆ ಶೇ.15 ತೆರಿಗೆ
12 ಲಕ್ಷದಿಂದ 15 ಲಕ್ಷದವರೆಗಿನ ಆದಾಯಕ್ಕೆ ಶೇ.20 ತೆರಿಗೆ
15 ಲಕ್ಷಕ್ಕಿಂತ ಹೆಚ್ಚಿನ ಆದಾಯಕ್ಕೆ 30% ತೆರಿಗೆ
ಈ ಬಾರಿಯ ಬಜೆಟ್ನಲ್ಲಿ ಆದಾಯ ತೆರಿಗೆ ಕಾಯಿದೆಯ ಸಮಗ್ರ ಪರಿಶೀಲನೆ ಮಾಡಲಾಗಿದೆ. ಮುಂದಿನ 6 ತಿಂಗಳ ಅವಧಿಯಲ್ಲಿ ಕಸ್ಟಮ್ಸ್ ಸುಂಕ ರಚನೆಯ ಸಮಗ್ರ ಪರಿಶೀಲನೆ.
ಚಿನ್ನ ಮತ್ತು ಬೆಳ್ಳಿ ಮೇಲಿನ ಸುಂಕ ತಗ್ಗಿಸಿ. ಚಿನ್ನ ಮತ್ತು ಬೆಳ್ಳಿಯ ಮೇಲಿನ ಕಸ್ಟಮ್ಸ್ ಸುಂಕವನ್ನು 6% ಮತ್ತು ಪ್ಲಾಟಿನಂ ಮೇಲೆ 6.5% ಕ್ಕೆ ಇಳಿಸಲು ಪ್ರಸ್ತಾಪ.
ಪರಿಸರಕ್ಕೆ ಹಾನಿ ಮಾಡುವ ಫ್ಲೆಕ್ಸ್ಗಳ ಮೇಲಿನ ತೆರಿಗೆ ಮತ್ತಷ್ಟು ಏರಿಕೆ ಮಾಡಲಾಗಿದೆ. ಆಮದಾಗುವ ಬಟ್ಟೆಗಳ ಮೇಲಿನ ತೆರಿಗೆ ಹೆಚ್ಚಳ. ಆಮದು ಪ್ಲಾಸ್ಟಿಕ್ ಮೇಲಿನ ತೆರಿಗೆ ಶೇ.25 ಏರಿಕೆ ಮಾಡಲಾಗಿದೆ