ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ ಮೊದಲ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ ಏಳನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.
ಈ ಬಾರಿಯ ಬಜೆಟ್ನಲ್ಲಿ ವಿದ್ಯಾರ್ಥಿಗಳಿಗೆ ಎಜುಕೇಷನ್ ಲೋನ್ ಸೌಲಭ್ಯ ಘೋಷಿಸಲಾಗಿದೆ. ಉನ್ನತ ಶಿಕ್ಷಣಕ್ಕೆ 10 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಒದಗಿಸಲಾಗಿದೆ. ಪ್ರತಿ ವರ್ಷ 25000 ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಮಾದರಿ ಕೌಶಲ್ಯ ಸಾಲ ಯೋಜನೆಯನ್ನ ಪರಿಷ್ಕರಿಸಲು ಕೇಂದ್ರ ಬಜೆಟ್ನಲ್ಲಿ ಪ್ರಸ್ತಾಪ. ದೇಶೀಯ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣಕ್ಕಾಗಿ 10 ಲಕ್ಷ ರೂ.ವರೆಗಿನ ಸಾಲಕ್ಕಾಗಿ ಇ-ವೋಚರ್ ಗಳನ್ನು ಪ್ರತಿ ವರ್ಷ 1 ಲಕ್ಷ ವಿದ್ಯಾರ್ಥಿಗಳಿಗೆ ನೇರವಾಗಿ ಸಾಲದ ಮೊತ್ತದ 3% ವಾರ್ಷಿಕ ಬಡ್ಡಿ ಸಹಾಯಧನಕ್ಕಾಗಿ ನೀಡಲಾಗುವುದು.