ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್ಗೆ ಕೆಐಎಡಿಬಿಯಿಂದ ಐದು ಎಕರೆ ಜಾಗ ಪಡೆದಿರುವ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಸಚಿವರಾಗಿ ಪ್ರಿಯಾಂಕ್ ಖರ್ಗೆ ಅವರು ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ.
ಜೊತೆಗೆ ಜಿಂದಾಲ್ ಕಂಪನಿಗೆ ಸಚಿವ ಸಂಪುಟದ ನಿರ್ಧಾರದಂತೆ ಜಮೀನು ಹಸ್ತಾಂತರ ಪ್ರಕ್ರಿಯೆ ಸ್ಥಗಿತಗೊಳಿಸಿ ತನಿಖೆ ಮಾಡಿಸಬೇಕು ಮತ್ತು ಸಿದ್ಧಾರ್ಥ ವಿಹಾರ ಟ್ರಸ್ಟ್ಗೆ ಕೆಐಎಡಿಬಿಯಿಂದ ಕೊಟ್ಟಿರುವ ರೀತಿಯಲ್ಲಿ ಬೇರೆ ಸಂಸ್ಥೆಗಳಿಗೂ ನೀಡಿರುವ ಎಲ್ಲಾ ಜಮೀನುಗಳ ತನಿಖೆ ಮಾಡಿಸಬೇಕು ಎಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.