ಸ್ಯಾಂಡಲ್ವುಡ್ ನಟ ಅನಿರುದ್ಧ್ ಜತ್ಕರ್ 5 ವರ್ಷಗಳ ನಂತರ ಬೆಳ್ಳಿ ಪರದೆ ಮೇಲೆ ಬರ್ತಿದ್ದಾರೆ. 2018 ರಲ್ಲಿ ರಾಜಸಿಂಹ ಚಿತ್ರದ ನಂತರ “ಚೆಫ್ ಚಿದಂಬರ” ಎಂಬ ಸಿನಿಮಾ ಮೂಲಕ ಫುಲ್ ಫ್ಲೆಡ್ಜ್ ಆಗಿ ತೆರೆ ಮೇಲೆ ಬರ್ತಿದ್ದಾರೆ.
ಈಗಾಗಲೇ ಚಿತ್ರದ ಟೀಸರ್ ಮತ್ತು ಸಾಂಗ್ ಸಿನಿಪ್ರಿಯರ ಗಮನ ಸೆಳೆದಿದೆ. ಇದೀಗ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ ಚಿತ್ರತಂಡ. “ಚೆಫ್ ಚಿದಂಬರ” ಇದೇ ಜೂನ್ 14 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಐದು ವರ್ಷಗಳ ನಂತರ ಅನಿರುದ್ದ್ ಅಭಿನಯಿಸಿರುವ ಚಿತ್ರ ತೆರೆಗೆ ಬರುತ್ತಿದೆ.
ಇನ್ನು ಅನಿರುದ್ಧ್ ಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ “ಲವ್ ಮಾಕ್ಟೇಲ್” ಖ್ಯಾತಿಯ ರೆಚೆಲ್ ಡೇವಿಡ್ ಅಭಿನಯಿಸಿದ್ದಾರೆ. ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್, ಶಿವಮಣಿ ಮುಂತಾದ ಕಲಾವಿದರು ಈ ಸಿನಿಮಾದಲ್ಲಿದ್ದಾರೆ.
ನಟ ಅನಿರುದ್ದ್ ಈ ಚಿತ್ರದಲ್ಲಿ ಬಾಣಸಿಗನ ಪಾತ್ರ ಮಾಡಿದ್ದು, ಎಂ ಆನಂದರಾಜ್ ನಿರ್ದೇಶಿಸಿದ್ದಾರೆ. ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ನಿರ್ಮಾಣ ಮಾಡಿದ್ದಾರೆ. ಉದಯಲೀಲ ಕ್ಯಾಮೆರಾ ವರ್ಕ್, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ…