- ಚೆನ್ನೈ ನಿಂದ ಮುಂಬೈಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ
- ಮುಂಬೈನಲ್ಲೇ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ
- ಪ್ರಯಾಣಿಕರು ಸುರಕ್ಷಿತವಾಗಿದ್ದು, ವಿಮಾನವು ತಪಾಸಣೆಗೆ ಒಳಪಟ್ಟಿದೆ
ಚೆನ್ನೈ ನಿಂದ ಮುಂಬೈಗೆ ಹೊರಟಿದ್ದ ಇಂಡಿಗೋ 6 ಇ 5314 ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನಲೆಯಲ್ಲಿ ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಚೆನ್ನೈನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಹೀಗಾಗಿ ಮುಂಬೈನಲ್ಲೇ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಸಿಬ್ಬಂದಿ ಪ್ರೊಟೋಕಾಲ್ ಅನ್ನು ಅನುಸರಿಸಿದರು. ಭದ್ರತಾ ಏಜೆನ್ಸಿ ಮಾರ್ಗಸೂಚಿಗಳ ಪ್ರಕಾರ ವಿಮಾನವನ್ನು ಪ್ರತ್ಯೇಕ ಜಾಗಕ್ಕೆ ಕೊಂಡೊಯ್ಯಲಾಗಿದೆ ಎಂದು ವಿಮಾನ ಸಂಸ್ಥೆ ತಿಳಿಸಿದೆ. ಸದ್ಯ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ವಿಮಾನವು ತಪಾಸಣೆಗೆ ಒಳಪಟ್ಟಿದೆ. ವಿಮಾನದಲ್ಲಿ ಎಲ್ಲಾ ತಪಾಸಣೆಗಳನ್ನು ಪೂರ್ಣಗೊಳಿಸಿದ ನಂತರ ವಿಮಾನವನ್ನು ಟರ್ಮಿನಲ್ಗೆ ತರಲಾಗುವುದು ಎಂದು ಇಂಡಿಗೋ ತಿಳಿಸಿದೆ.