- ವಿವೇಕಾನಂದ ರಾಕ್ ಮೆಮೊರಿಯಲ್ನ ಧ್ಯಾನ ಮಂಟಪದಲ್ಲಿ ಮೋದಿ ಧ್ಯಾನ
- ಜೂನ್ 1 ರವರೆಗೆ ಪ್ರಧಾನಿ ಮೋದಿ ಕನ್ಯಾಕುಮಾರಿಯಲ್ಲಿ ಧ್ಯಾನ
- ಮೋದಿ ಧ್ಯಾನ ಮಾಡುವ ವಿಡಿಯೋ ಹಂಚಿಕೊಂಡ ಬಿಜೆಪಿ
ಚೆನ್ನೈ : ಲೋಕಸಭಾ ಚುನಾವಣೆ ಪ್ರಚಾರ ಮುಗಿಸಿ ವಿಶ್ರಾಂತಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಬೆಳಗ್ಗೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ರಾಕ್ ಮೆಮೊರಿಯಲ್ನ ಧ್ಯಾನ ಮಂಟಪದಲ್ಲಿ ಧ್ಯಾನ ಅಸಕ್ತರಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ವಿಡಿಯೋವನ್ನು ಬಿಜೆಪಿ ತನ್ನ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಂಡಿದೆ. ಜೂನ್ 1 ರವರೆಗೆ ಅವರು ಇಲ್ಲಿ ಧ್ಯಾನ ಮಾಡಲಿದ್ದಾರೆ. 45 ಗಂಟೆಗಳ ದೀರ್ಘ ಧ್ಯಾನ ಅವರದ್ದಾಗಿರಲಿದೆ ಎಂದು ಬಿಜೆಪಿ ಬರೆದುಕೊಂಡಿದೆ.