ರಿಷಬ್ ಶೆಟ್ಟಿ ನಿರ್ದೇಶನಕ ಕಾಂತಾರ ಸಿನಿಮಾ ರಿಲೀಸ್ ಆಗಿ ಯಶಸ್ಸು ಕಂಡಿತ್ತು. ಇದಾದ ಬಳಿಕ ಕಾಂತಾರ 2 ಸಿನಿಮಾ ಚಿತ್ರಿಕರಣದಲ್ಲಿ ರಿಷಬ್ ಶೆಟ್ಟಿ ಬ್ಯುಸಿಯಾಗಿದ್ದರು. ಸಿನಿಮಾ ಚಿತ್ರೀಕರಣದ ನಡುವೆಯೂ ಆಗಾಗ ಬಿಡುವು ಮಾಡಿಕೊಂಡು ತಮ್ಮ ಕುಟುಂಬದ ಜೊತೆ ಕಾಲಕಳೆಯುತ್ತಾರೆ ರಿಷಬ್ ಶೆಟ್ಟಿ. ಇಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿರುವ ಹರಿಹರಪುರ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಅವರ ಪತ್ನಿ, ಮಗ, ಮಗಳ ಜತೆ ಕುಟುಂಬ ಸಮೇತರಾಗಿ ಬೇಟಿ ಕೊಟ್ಟಿದ್ದಾರೆ. ತುಂಗಾ ನದಿ ತಟದಲ್ಲಿರುವ ಇತಿಹಾಸ ಪ್ರಸಿದ್ಧ ದೇಗುಲ ಇದಾಗಿದೆ.
ಕೊಪ್ಪ ತಾಲೂಕಿನ ಹರಿಹರಪುರ ಕ್ಷೇತ್ರಕ್ಕೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಭೇಟಿ ನೀಡಿದ್ದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ತಮ್ಮ ಪತ್ನಿ, ಮಗಳ ಜೊತೆ ಕುಟುಂಬ ಸಮೇತರಾಗಿ ಭೇಟಿ ನೀಡಿ ಶಾರದಾ ಲಕ್ಷ್ಮಿ ನರಸಿಂಹಸ್ವಾಮಿಯ ದರ್ಶನ ಪಡೆದರು.
ರಿಷಬ್ ಶೆಟ್ಟಿ ಹಾಗೂ ಅವರ ಕುಟುಂಬ ಹರಿಹರಪುರದ ಶ್ರೀ ಸ್ವಯಂ ಸಚ್ಚಿದಾನಂದ ಶ್ರೀಗಳ ದರ್ಶನ ಪಡೆದರು.
ತುಂಗಾ ನದಿ ತಟದಲ್ಲಿರುವ ಇತಿಹಾಸ ಪ್ರಸಿದ್ಧ ದೇಗುಲವಾಗಿದ್ದು, ಮಠದ ಆವರಣದ ಆಂಜನೇಯನ ಬಳಿ ಅಭಿಮಾನಿಗಳ ಜೊತೆ ಸೆಲ್ಫಿಗೆ ಫೋಸ್ಕೊಟ್ಟರು.